ಶಹಜಹಾನಪುರ: 12 ವರ್ಷ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ, ಆಕೆ ಗರ್ಭಿಣಿಯಾಗಲು ಕಾರಣರಾಗಿದ್ದ ಇಬ್ಬರು ಸಹೋದರರು ಮೂರು ದಶಕಗಳ ನಂತರ ಶಿಕ್ಷೆಗೆ ಗುರಿಯಾಗಿದ್ದಾರೆ. ಇಬ್ಬರು ಅಪರಾಧಿಗಳಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಸಂತ್ರಸ್ತೆಯ ಪುತ್ರ ತನ್ನ ತಂದೆ ಯಾರು ಎಂದು ಪ್ರಶ್ನಿಸಿದಾಗ ಈ ಪ್ರಕರಣವು ಬಯಲಿಗೆ ಬಂದಿತ್ತು. ‘ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಗುಡ್ಡು ಹಸನ್ ಮತ್ತು ನಾಕಿ ಹಸನ್ ಎನ್ನುವವರು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳು ಎಂದು ಘೋಷಿಸಿದ್ದಾರೆ’ ಎಂದು ಸರ್ಕಾರಿ ವಕೀಲ ರಾಜೀವ್ ಅವಸ್ಥಿ ಗುರುವಾರ ತಿಳಿಸಿದ್ದಾರೆ.

ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ 2021ರ ಮಾರ್ಚ್‌ನಲ್ಲಿ ದೂರು ದಾಖಲಾದ ನಂತರ ನಾಕಿ ಮತ್ತು ಗುಡ್ಡು ಸಹೋದರರನ್ನು 2022ರಲ್ಲಿ ಬಂಧಿಸಲಾಗಿತ್ತು. ಸಂತ್ರಸ್ತೆ, ಆಕೆಯ ಪುತ್ರ ಹಾಗೂ ಈ ಸಹೋದರರ ಡಿಎನ್‌ಎ ಪರೀಕ್ಷೆಗೆ ಆದೇಶಿಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತೆಯು 1994ರಲ್ಲಿ ಶಹಜಹಾನಪುರದ ಸದರ್ ಬಜಾರ್ ಪ್ರದೇಶದಲ್ಲಿ ತನ್ನ ಸಹೋದರಿ ಮತ್ತು ಬಾವನ ಜೊತೆ ವಾಸಿಸುತ್ತಿದ್ದಳು. ಅದೇ ಪ್ರದೇಶದಲ್ಲಿ ಇದ್ದ ನಾಕಿ ಹಸನ್ ಸಂತ್ರಸ್ತೆಯು ಒಬ್ಬಳೇ ಇದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಪೊಲೀಸರ ವರದಿಯಲ್ಲಿ ವಿವರಿಸಲಾಗಿದೆ.

ಆತನ ತಮ್ಮ ಗುಡ್ಡು ಕೂಡ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಇಬ್ಬರೂ ಹಲವು ಸಂದರ್ಭಗಳಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದರು ಎಂದು ಸಂತ್ರಸ್ತೆಯು ಆರೋಪಿಸಿದ್ದಳು. ಆಕೆಯು ಮಗುವಿಗೆ ಜನ್ಮ ನೀಡಿದ್ದಳು. ನಂತರ ಆ ಮಗುವನ್ನು ಸಂಬಂಧಿಕರ ಬಳಿ ಬಿಟ್ಟಿದ್ದಳು. ಆಕೆಗೆ ಮದುವೆ ಆಯಿತು. ಆದರೆ, ಸಾಮೂಹಿಕ ಅತ್ಯಾಚಾರದ ಬಗ್ಗೆ ತಿಳಿದ ಪತಿ ಆಕೆಯನ್ನು ಬಿಟ್ಟುಹೋಗಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.