ನೊಯ್ಡಾ: ಸಂಘಟಿತ ಮಾಫಿಯಾ ನಡೆಸುತ್ತಿದ್ದ ಗ್ಯಾಂಗ್‌ಸ್ಟರ್‌ಗೆ ಸೇರಿದ್ದ ಸುಮಾರು ₹100 ಕೋಟಿ ಮೌಲ್ಯದ ಆಸ್ತಿಯನ್ನು ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ.

ರವಿ ನಗರದ ರವೀಂದ್ರ ಸಿಂಗ್ ಅಲಿಯಾಸ್ ರವಿ ‘ಕಾನಾ’ ಎಂಬ ಗ್ಯಾಂಗ್‌ಸ್ಟರ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್ ಕಾಯ್ದೆ ಅಡಿಯಲ್ಲಿ ಈತನ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಕಾನಾ ವಿರುದ್ಧ ಕಾರ್ಯಾಚರಣೆ ನಡೆಸಿದ ಬಿಟಾ 2 ಠಾಣೆಯ ಪೊಲೀಸರು, ಗ್ರೇಟರ್ ನೊಯ್ಡಾದಲ್ಲಿ ಈತನಿಗೆ ಸೇರಿದ ಆಸ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಈತ ಗುಜರಿ ವ್ಯಾಪಾರಿಯಾಗಿರುವ ಈತನ ವಿರುದ್ಧ ಸೆಕ್ಟರ್ 39 ಪೊಲಿಸ್ ಠಾಣೆಯಲ್ಲಿ ಡಿ. 30ರಂದು ಎಫ್‌ಐಆರ್ ದಾಖಲಾಗಿತ್ತು. ಈತನೊಂದಿಗೆ ಇತರ ಐವರು ಸೇರಿ ಶಾಪಿಂಗ್ ಮಾಲ್‌ನಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣದ ವಿಚಾರಣೆಯನ್ನೂ ಪೊಲೀಸರು ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.