ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರದಲ್ಲಿ ನಿಧಾನವಾಗಿ ಶಾಂತಿ ಮರುಕಳಿಸುತ್ತಿದೆ: ಮುಖ್ಯಮಂತ್ರಿ ಬಿರೇನ್‌ ಸಿಂಗ್‌

Published 11 ಮಾರ್ಚ್ 2024, 11:05 IST
Last Updated 11 ಮಾರ್ಚ್ 2024, 11:05 IST
ಅಕ್ಷರ ಗಾತ್ರ

ಇಂಫಾಲ: ಸುಮಾರು ನಾಲ್ಕು ತಿಂಗಳ ಬಳಿಕ ರಾಜ್ಯದಲ್ಲಿ ನಿಧಾನವಾಗಿ ಶಾಂತಿ ಮರುಕಳಿಸುತ್ತಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಸೋಮವಾರ ಹೇಳಿದ್ದಾರೆ.

ವಿವಿಧ ಕಲ್ಯಾಣ ಯೋಜನೆಗಳನ್ನು ಜನರಿಗೆ ಹಂಚುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ‘ಶಾಂತಿ ಮರುಸ್ಥಾಪನೆಗಾಗಿ ನಾವು ಶ್ರಮಿಸುತ್ತಿದ್ದೇವೆ. ಕಳೆದ ವರ್ಷ  ಮೇ ತಿಂಗಳಿನಲ್ಲಿ  ಭುಗಿಲೆದ್ದ ಹಿಂಸಾಚಾರದಿಂದಾಗಿ ರಾಜ್ಯದಲ್ಲಿ ಶಾಂತಿ ಕದಡಿತ್ತು. ಆದರೆ ನಿಧಾನವಾಗಿ ಸಹಜ ಸ್ಥತಿಗೆ ಬರುತ್ತಿದೆ’ ಎಂದರು

ಮಣಿಪುರದಲ್ಲಿ ನಡೆದ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ‘ದುರದೃಷ್ಟಕರ ಸಂಗತಿಯೆಂದರೆ ಸರ್ಕಾರದ ಮೇಲೆ ಉದ್ದೇಶಪೂರ್ವಕ ದಾಳಿಗಳು ನಡೆಯುತ್ತವೆ ಎಂದು ನಾವು ನಿರೀಕ್ಷಿಸಿರಲಿಲ್ಲ. ಅದಾಗ್ಯೂ, ಅಹಿತಕರ ಘಟನೆ ನಡೆಯದಂತೆ ಸರ್ಕಾರ ಕ್ರಮವಹಿಸಿದೆ’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT