ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂದು ಬಾರ್ ಆ್ಯಂಡ್ ಬೆಂಚ್ ವರದಿ ಮಾಡಿದೆ.
ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್ ನಿರ್ಧಾರವನ್ನು ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಹಾಗೂ ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಎತ್ತಿಹಿಡಿಯಿತು. ಆರೋಪಿ ವಿಚಾರಣೆಗೆ ಸಹಕರಿಸುತ್ತಿದ್ದಾರೆ ಎಂದು ಇದೇ ವೇಳೆ ನುಡಿಯಿತು.
2023ರ ಡಿಸೆಂಬರ್‌ನಲ್ಲಿ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಕರ್ನಾಟಕ ಹೈಕೋರ್ಟ್‌ನ ತೀರ್ಪು ಪ್ರಶ್ನಿಸಿ ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಕರ್ನಾಟಕ ಸರ್ಕಾರದಿಂದ ಕೋರ್ಟ್ ವಿವರಣೆ ಬಯಸಿತ್ತು.