ಗಯಾ, ಬಿಹಾರ: ಗೃಹ ರಕ್ಷಕ ದಳದ ನೇಮಕಾತಿ ಪರೀಕ್ಷೆ ವೇಳೆ ಪ್ರಜ್ಞೆ ತಪ್ಪಿ ಆಸ್ಪತ್ರೆಗೆ ಆಂಬುಲೆನ್ಸ್ನಲ್ಲಿ ಹೋಗುತ್ತಿದ್ದ ವೇಳೆ ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆಯೊಬ್ಬರು ಶನಿವಾರ ದೂರು ಸಲ್ಲಿಸಿದ್ದಾರೆ.

ಮಹಿಳೆ ನೀಡಿದ ದೂರು ಮತ್ತು ಅವರು ಆರೋಪಿಗಳನ್ನು ಗುರುತಿಸಿದ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಜುಲೈ 24ರಂದು ಪರೀಕ್ಷೆಗೆ ಹಾಜರಾಗಿದ್ದ ಮಹಿಳೆಯು ಮೂರ್ಛೆ ತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಂಬುಲೆನ್ಸ್ನಲ್ಲಿ ಗಯಾದಲ್ಲಿರುವ ಅನುಗ್ರಹ ನಾರಾಯಣ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಜ್ಞೆ ಬಂದ ವೇಳೆ ವಾಹನದ ಒಳಗಡೆಯೇ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ’ ಎಂದು ಗಯಾ (ನಗರ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮಾನಂದ್ ಕುಮಾರ್ ಕೌಶಲ್ ತಿಳಿಸಿದ್ದಾರೆ.

‘ಆಂಬುಲೆನ್ಸ್ನಲ್ಲಿದ್ದ ಚಾಲಕ ಹಾಗೂ ಟೆಕ್ನಿಷಿಯನ್ ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಈ ವೇಳೆ ಅವರ ಉತ್ತರ ತೃಪ್ತಿಕರವಾಗಿರಲಿಲ್ಲ. ಅವರ ವಿರುದ್ಧ ಬಿಎನ್ಎಸ್ನ ವಿವಿಧ ಕಲಂಗಳ ಅಡಿಯಲ್ಲಿ ದೂರು ದಾಖಲಿಸಿ, ಬಂಧಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ರಾಜ್ಯ ವಿಧಾನಸಭೆಗೆ ಈ ವರ್ಷದ ಅಕ್ಟೋಬರ್– ನವೆಂಬರ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಅತ್ಯಾಚಾರ ಪ್ರಕರಣ ವರದಿಯಾದ ಬೆನ್ನಲ್ಲೇ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್, ವಿರೋಧ ಪಕ್ಷವಾದ ಕಾಂಗ್ರೆಸ್, ಆರ್ಜೆಡಿ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

‘ಅತ್ಯಾಚಾರ ಘಟನೆ ಖಂಡನಾರ್ಹ. ತಪ್ಪಿತಸ್ಥರನ್ನು ಬಂಧಿಸಬಹುದು. ಆದರೆ, ಸರ್ಕಾರವು ಇಂತಹ ಅಪರಾಧಗಳನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಪಾಸ್ವಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತಂತೆ ವಿಡಿಯೊ ಹಂಚಿಕೊಂಡಿರುವ ರಾಜ್ಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್,‘ಹೆಣ್ಣು ಮಕ್ಕಳ ರಕ್ಷಣೆಗಾಗಿ ನಿತೀಶ್ ಕುಮಾರ್ ಸರ್ಕಾರವನ್ನು ತೊಲಗಿಸಬೇಕು’ ಎಂದು ಕರೆ ನೀಡಿದ್ದಾರೆ.

‘ಬಿಹಾರವು ರಾಕ್ಷಸರ ಆಡಳಿತಕ್ಕೆ ಒಳಪಟ್ಟಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಅವರ ಇಬ್ಬರು ಉಪ ಮುಖ್ಯಮಂತ್ರಿಗಳು ಇಂತಹ ಘಟನೆಗಳು ನಡೆದಾಗ ಕ್ರಿಮಿನಲ್ ಮೌನ ವಹಿಸುತ್ತಾರೆ’ ಎಂದು ಕಿಡಿಕಾರಿದ್ದಾರೆ.

‘ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿರುವುದನ್ನು ಗಯಾ ಘಟನೆ ತೋರಿಸುತ್ತಿದೆ. ನೊಂದ ಹೆಣ್ಣು ಮಗುವಿಗೆ ನ್ಯಾಯ ಕೊಡಿಸಲು ಪಕ್ಷ ಬದ್ಧವಾಗಿದೆ’ ಎಂದು ಬಿಹಾರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಪರಿಸ್ಥಿತಿ ಭಯಾನಕವಾಗಿದ್ದು ಕಾನೂನು ಹಾಗೂ ಸುವ್ಯವಸ್ಥೆಯನ್ನು ನಿಯಂತ್ರಿಸಲು ವಿಫಲವಾದ ಆಡಳಿತ ಸರ್ಕಾರವನ್ನು ಬೆಂಬಲಿಸುತ್ತೇನೆ ಎಂದು ತಿಳಿಸಲು ವಿಷಾದಿಸುತ್ತಿದ್ದೇನೆ

–ಚಿರಾಗ್ ಪಾಸ್ವಾನ್ ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.