ಲಖನೌ: ಗಾಜಿಪುರದಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೊಳ್ಳಬೇಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಗಾಜಿಯಾಬಾದ್ ಪೊಲೀಸರು ಮನವಿ ಮಾಡಿದ್ದಾರೆ.

ಪ್ರಕರಣ ಸಂಬಂಧ ತನಿಖೆಗೆ ಆಗ್ರಹಿಸಿ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ರಾಹುಲ್ ಗಾಂಧಿ, ಬಾಲಕಿ ಸಾವಿನ ಬಗ್ಗೆ ಎಫ್ಐಆರ್ ದಾಖಲಿಸಲು ಪೊಲೀಸರು ನಿರಾಕರಿಸಿದ್ದರು ಎಂದು ಆರೋಪಿಸಿದ್ದರು. ಪ್ರಕರಣ ದಾಖಲಿಸಲು ಪೊಲೀಸರ ಮುಂದೆ ಪೋಷಕರು ಮಂಡಿಯೂರಬೇಕಾದ ಪರಿಸ್ಥಿತಿ ಇದೆ ಎಂದೂ ಹೇಳಿದ್ದರು.

ಈ ಪೋಸ್ಟ್ಗೆ ಪ್ರತಿಕ್ರಿಯಿಸಿರುವ ಗಾಜಿಯಾಬಾದ್ ಪೊಲೀಸರು, ಶಾಂತಿ ಕದಡುವ ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ.

‘2026ರ ಏಪ್ರಿಲ್ 15ರಂದು ಬೆಳಿಗ್ಗೆ 5:44ಕ್ಕೆ ಪೊಲೀಸ್ ಸಹಾಯವಾಣಿ 112ಕ್ಕೆ ಬಾಲಕಿ ತಂದೆ ಕರೆ ಮಾಡಿದ್ದರು. ಮಗಳು ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದರು. ಈ ಪ್ರಕರಣದಲ್ಲಿ ಸಂತ್ರಸ್ತೆಯ ತಂದೆ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ದಾಖಲಾದ ಎಫ್ಐಆರ್ನಲ್ಲಿ ಅತ್ಯಾಚಾರದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಸಂತ್ರಸ್ತೆಯ ಮರಣೋತ್ತರ ಪರೀಕ್ಷೆಯಲ್ಲೂ ಅತ್ಯಾಚಾರಕ್ಕೆ ಸಂಬಂಧಿಸಿದ ಯಾವುದೇ ಅಂಶಗಳು ಕಂಡುಬಂದಿಲ್ಲ’ ಎಂದು ತಿಳಿಸಿದ್ದಾರೆ.
.ಗಾಜಿಪುರ ಅತ್ಯಾಚಾರ ಪ್ರಕರಣದಲ್ಲಿ ದಲಿತ, ಬಡ ಹೆಣ್ಣುಮಕ್ಕಳೇ ಬಲಿಪಶು: ರಾಹುಲ್ .
‘ಸಮಾಜದ ಶಾಂತಿಗೆ ಚ್ಯುತಿ ತರುವಂತಹ ಯಾವುದೇ ದೃಢೀಕರಿಸದ, ಸತ್ಯಕ್ಕೆ ದೂರವಾದ ಮತ್ತು ದಾರಿತಪ್ಪಿಸುವ ವದಂತಿಗಳನ್ನು ದಯವಿಟ್ಟು ಹರಡಬೇಡಿ. ಪ್ರಕರಣ ಸಂಬಂಧ ಗಾಜಿಪುರ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಲ್ಲು ತೂರಾಟ ನಡೆಸಿದ ಇತರ 10 ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ.

ಏಪ್ರಿಲ್ 15ರಂದು ಗಾಜಿಪುರ ಜಿಲ್ಲೆಯ ಕರಂಡಾ ಪ್ರದೇಶದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.