ಗುವಾಹಟಿ: ಅಸ್ಸಾಂನ 17 ವರ್ಷದ ಬಾಲಕಿಯೊಬ್ಬರು ಶಂಕಿತ ‘ಗೀಲನ್ ಬಾರೆ’(ಜಿಬಿಎಸ್) ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಈ ಋತುವಿನಲ್ಲಿ ರಾಜ್ಯದಲ್ಲಿ ಪತ್ತೆಯಾಗಿರುವ ಮೊದಲ ಪ್ರಕರಣವಿದು ಎಂದು ವೈದ್ಯರು ಶನಿವಾರ ತಿಳಿಸಿದ್ದಾರೆ.

ಜಿಬಿಎಸ್ ಸೋಂಕಿನಿಂದ ಬಾಲಕಿಯು ಸಾವಿಗೀಡಾಗಿರುವ ಬಗ್ಗೆ ಆಸ್ಪತ್ರೆ ಮತ್ತು ರಾಜ್ಯ ಆರೋಗ್ಯ ಇಲಾಖೆ ಅಧಿಕೃತವಾಗಿ ದೃಢಪಡಿಸಿಲ್ಲ.

‘12ನೇ ತರಗತಿಯ ವಿದ್ಯಾರ್ಥಿನಿಯನ್ನು ಹತ್ತು ದಿನಗಳ ಹಿಂದೆ ಪ್ರತೀಕ್ಷಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ಜಿಬಿಎಸ್ ಸೋಕು ಪತ್ತೆಯಾಗಿತ್ತು. ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದರಿಂದ ವೆಂಟಿಲೇಟರ್ ಸಹಾಯದೊಂದಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ ರಾತ್ರಿ ಅವರು ಮೃತಪಟ್ಟರು’ ಎಂದು ಮಕ್ಕಳ ತಜ್ಞವೈದ್ಯರೊಬ್ಬರು ತಿಳಿಸಿದ್ದಾರೆ.

‘ರಾಜ್ಯದಲ್ಲಿ ಪ್ರತಿವರ್ಷ ಜಿಬಿಎಸ್ ಪ್ರಕರಣಗಳು ಪತ್ತೆಯಾಗುತ್ತಿರುತ್ತವೆ ಮತ್ತು ಅದು ತೀವ್ರತೆಯನ್ನು ಹೊಂದಿರುವುದಿಲ್ಲ’ ಎಂದು ಹಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.