ಮಲಪ್ಪುರಂ: ಕಾರು ಅಪಘಾತವಾದಾಗ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಉಸಿರುಗಟ್ಟಿ 2 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಿನ್ನೆ ಸಂಭವಿಸಿದೆ.
ಮಗುವಿನ ಕುಟುಂಬದವರು ಕಾರಿನಲ್ಲಿ ಮಲಪ್ಪುರಂ ಜಿಲ್ಲೆಯ ಕೊಟ್ಟಕಲ್ಲು–ಪದಪರಂಬು ಮಾರ್ಗವಾಗಿ ಹೋಗುತ್ತಿದ್ದರು. ಈ ವೇಳೆ ಕಾರು ಎದುರಿಗೆ ಬರುತ್ತಿದ್ದ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿತ್ತು.
ಡಿಕ್ಕಿಯ ರಬಸಕ್ಕೆ ಕಾರಿನಲ್ಲಿದ್ದ ಏರ್‌ಬ್ಯಾಗ್ ತೆರೆದುಕೊಂಡಿತ್ತು. ಈ ವೇಳೆ ಮುಂದಿನ ಸೀಟ್‌ನಲ್ಲಿ ತಾಯಿ ಜೊತೆ ಕುಳಿತಿದ್ದ ಮಗು ಏರ್‌ಬ್ಯಾಗ್‌ನಲ್ಲಿ ಸಿಲುಕಿ ಉಸಿರುಟ್ಟಿ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಗುವಿನ ತಾಯಿ ಸೇರಿದಂತೆ ಕಾರಿನಲ್ಲಿದ್ದ ಇತರ ನಾಲ್ವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ಮಲಪ್ಪುರಂ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.