ಮಲಪ್ಪುರಂ(ಕೇರಳ): ಅಪಘಾತದ ವೇಳೆ ಏರ್ ಬ್ಯಾಗ್ ತೆರೆದುಕೊಂಡಿದ್ದರೂ, ಉಸಿರುಗಟ್ಟಿದ ಪರಿಣಾಮ ಎರಡು ವರ್ಷದ ಬಾಲಕಿ ಮೃತಪಟ್ಟ ಘಟನೆ ಮಲಪ್ಪುರಂ ಜಿಲ್ಲೆಯಲ್ಲಿ ಸಂಭವಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಬಾಲಕಿಯ ಕುಟುಂಬವು ಕೊಟ್ಟಕ್ಕಲ್–ಪಡಪರಂಬ ಮೂಲಕ ಶುಕ್ರವಾರ ಪ್ರಯಾಣಿಸುತ್ತಿದ್ದ ವೇಳೆ, ಕಾರು ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದಿತ್ತು. ಆಗ, ತಕ್ಷಣವೇ ಕಾರಿನ ಏರ್‌ಬ್ಯಾಗ್ ತೆರೆದುಕೊಂಡಿದೆ.

ಬಾಲಕಿಯು ತಾಯಿ ತೊಡೆ ಮೇಲೆ ಕುಳಿತಿದ್ದಳು. ಏರ್‌ಬ್ಯಾಗ್ ತೆರೆದುಕೊಂಡ ತೀವ್ರತೆಯಿಂದಾಗಿ ಉಸಿರುಗಟ್ಟಿ ಬಾಲಕಿ ಮೃತಪಟ್ಟಳು. ಇತರ ನಾಲ್ವರು ಪ್ರಯಾಣಿಕರಿಗೆ ಸಣ್ಣ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.