ಚೆನ್ನೈ: ನಗರದ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ಅಣ್ಣಾ ವಿಶ್ವವಿದ್ಯಾನಿಲಯದ ಕ್ಯಾಂಪಸ್ನೊಳಗೆ ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ರಸ್ತೆ ಬದಿಯ ವ್ಯಾಪಾರಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿ, ಆಕೆಯ ಸ್ನೇಹಿತನ ಮೇಲೂ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಡಿಸೆಂಬರ್ 23 ರಂದು ಸಂಜೆ ಈ ಘಟನೆ ನಡೆದಿದ್ದು, ಸಂತ್ರಸ್ತರು ಡಿ.24 ರಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಆರೋಪಿ ಜ್ಞಾನಶೇಖರನ್ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ‘ಪುನರಾವರ್ತಿತ ಅಪರಾಧಿ’ಯಾಗಿದ್ದಾನೆ. ಈತನ ವಿರುದ್ಧ ಬಿಎನ್ಎಸ್ ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

‘ಆರೋಪಿ, ವಿಶ್ವವಿದ್ಯಾನಿಲಯದ ಬಳಿಯ ಕೊಟ್ಟೂರ್ಪುರಂನಲ್ಲಿ ರಸ್ತೆ ಬದಿ ಉಪಾಹಾರ ಗೃಹ ನಡೆಸುತ್ತಿದ್ದ. ಕ್ಯಾಂಪಸ್ನಲ್ಲಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿದ ನಂತರ ಆರೋಪಿಯನ್ನು ಬಂಧಿಸಲಾಯಿತು. ಕೃತ್ಯ ಎಸಗಿರುವುದನ್ನು ಆತ ಒಪ್ಪಿಕೊಂಡಿದ್ದಾನೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮತ್ತು ಆಕೆಯ ಗೆಳೆಯ ಸೋಮವಾರ ರಾತ್ರಿ ಊಟದ ನಂತರ ವಿಶ್ವವಿದ್ಯಾನಿಲಯದ ಕ್ಯಾಂಪಸ್ನಲ್ಲಿರುವ ಕಟ್ಟಡದ ಹಿಂದೆ ಮಾತನಾಡುತ್ತ ನಿಂತಿದ್ದರು. ಆಗ ಆರೋಪಿ ವಿದ್ಯಾರ್ಥಿಗೆ ಬೆದರಿಕೆ ಹಾಕಿ ಹಲ್ಲೆ ನಡೆಸಿ, ತಕ್ಷಣ ವಿದ್ಯಾರ್ಥಿನಿಯನ್ನು ಪಕ್ಕದ ಪೊದೆಗೆ ಎಳೆದೊಯ್ದು, ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಸಂತ್ರಸ್ತ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಯೊಂದಿಗೆ ಆಪ್ತಸಮಾಲೋಚನೆ ನಡೆಸಲಾಗಿದೆ. ವಿಶ್ವವಿದ್ಯಾಲಯದ ಆಂತರಿಕ ದೂರುಗಳ ಸಮಿತಿಯ ಸಮನ್ವಯದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಭದ್ರತೆಯ ಖಾತ್ರಿಗೆ ಸೂಕ್ತ ಕ್ರಮಕ್ಕಾಗಿ ಗ್ರೇಟರ್ ಚೆನ್ನೈ ಪೊಲೀಸ್ (ಜಿಸಿಸಿ) ಮತ್ತು ವಿಶ್ವವಿದ್ಯಾಲಯದ ಭದ್ರತಾ ಅಧಿಕಾರಿಗಳಿಂದ ಜಂಟಿ ಭದ್ರತಾ ಪರಿಶೀಲನೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದರೆ, ಸಂತ್ರಸ್ತ ವಿದ್ಯಾರ್ಥಿಗಳಿಗೆ ನ್ಯಾಯಕೊಡಿಸಲು ಬದ್ಧವಾಗಿದ್ದೇವೆ ಎಂದು ವಿಶ್ವವಿದ್ಯಾಲಯ ಹೇಳಿದೆ.

ಕ್ಯಾಂಪಸ್ನಲ್ಲಿ ಉಳಿದುಕೊಂಡಿರುವ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ಹಲವು ವಿದ್ಯಾರ್ಥಿ ಸಂಘಟನೆಗಳು ಬುಧವಾರ ಅಣ್ಣಾ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.