ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ– 3 ಆರೋಪಿಗಳು ವಶಕ್ಕೆ

Published 22 ಫೆಬ್ರುವರಿ 2024, 20:45 IST
Last Updated 22 ಫೆಬ್ರುವರಿ 2024, 20:45 IST
ಅಕ್ಷರ ಗಾತ್ರ

ಜೈಪುರ: ಬಿಕಾನೇರ್‌ ಜಿಲ್ಲೆಯ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ದೇಶ್ನೋಕ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರೇವತ್‌ ರಾಮ್‌, ಓಂಪ್ರಕಾಶ್ ದುದಿ ಹಾಗೂ ಲೀಲಾಧರ್ ಗೋಡಾರ ಆರೋಪಿಗಳು.

‘ಆರೋಪಿಗಳು ಬಾಲಕಿಯನ್ನು ಮಂಗಳವಾರ ಅಪಹರಣ ಮಾಡಿ, ಬಲವಂತದಿಂದ ಪಾನೀಯ ಕುಡಿಸಿದ್ದಾರೆ. ಇದರಿಂದ ಬಾಲಕಿ ಪ್ರಜ್ಞೆ ತಪ್ಪಿದೆ. ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳು, ನಂತರ ಗ್ರಾಮದ ಬಳಿ ಆಕೆಯನ್ನು ಬಿಟ್ಟು ಹೋಗಿದ್ದರು’ ಎಂದು ಪೊಲೀಸ್‌ ಅಧಿಕಾರಿ ಸುಮನ್ ಶೆಖಾವತ್‌ ಹೇಳಿದ್ದಾರೆ.

ಕೃತ್ಯದ ಕುರಿತು ಬಾಲಕಿ ತನ್ನ ಕುಟುಂಬಸ್ಥರಿಗೆ ವಿವರಿಸಿದ್ದು, ಅವರು ನೀಡಿರುವ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆ ಹಾಗೂ ಆರೋಪಿಗಳು ಒಂದೇ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT