ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಅಭಿವೃದ್ಧಿಗೆ ಅಡ್ವಾಣಿ ಕೊಡುಗೆ ಅಪಾರ: ಶರದ್‌ ಪವಾರ್‌

Published 3 ಫೆಬ್ರುವರಿ 2024, 9:14 IST
Last Updated 3 ಫೆಬ್ರುವರಿ 2024, 9:14 IST
ಅಕ್ಷರ ಗಾತ್ರ

ಪುಣೆ: ‘ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಸಂತಸ ತಂದಿದೆ. ದೇಶದ ಅಭಿವೃದ್ಧಿಗೆ ಅವರು ಅಪಾರ ಕೊಡುಗೆ ನೀಡಿದ್ದಾರೆ’ ಎಂದು ನ್ಯಾಷನಲಿಸ್ಟ್‌ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್‌ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್‌, ‘ದೇಶದ ಅಭಿವೃದ್ಧಿಗಾಗಿ ಅಡ್ವಾಣಿ ದುಡಿದಿದ್ದಾರೆ. ಅವರಿಗೆ ಭಾರತ ರತ್ನ ಗೌರವ ಸಂದಿರುವುದು ಸಂತಸ ತಂದಿದೆ’ ಎಂದರು.

ಎಲ್‌.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಘೋಷಿಸಿದ್ದರು. ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರ ಜನ್ಮಶತಮಾನೋತ್ಸವದ ಸಂದರ್ಭದಲ್ಲಿ ಅವರಿಗೂ ‘ಭಾರತ ರತ್ನ’(ಮರಣೋತ್ತರ) ಪ್ರಶಸ್ತಿ ಘೋಷಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT