ಸಿಬಿಐಗೆ ನೂತನ ಮುಖ್ಯಸ್ಥರ ನೇಮಕ ಮಾಡುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಆಯ್ಕೆ ಸಮಿತಿ‘ಸಭೆಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಲಿಲ್ಲ’ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸಮಿತಿಯ ಸದಸ್ಯರಾದ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ಪ್ರಧಾನಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.