ಪಣಜಿ:ಗೋವಾದಲ್ಲಿ ಬುಧವಾರ ಸಂಜೆ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ನ 15 ಶಾಸಕರಲ್ಲಿ 10 ಮಂದಿ ಬಿಜೆಪಿ ಸೇರಿದ್ದಾರೆ.

ವಿರೋಧ ಪಕ್ಷದ ನಾಯಕ ಚಂದ್ರಕಾಂತ್ ಕವಲೇಕರ್ ನೇತೃತ್ವದಲ್ಲೇ ಈ ಶಾಸಕರು ಕಾಂಗ್ರೆಸ್ ತೊರೆದಿದ್ದಾರೆ.

ವಿಧಾನಸಭೆ ಸ್ಪೀಕರ್ ರಾಜೇಶ್ ಪಾಟ್ನೇಕರ್ ಅವರನ್ನು ಸಂಜೆ ಚಂದ್ರಕಾಂತ್ ಅವರ ನೇತೃತ್ವದಲ್ಲಿ ಭೇಟಿಯಾದ ಶಾಸಕರು, ಕಾಂಗ್ರೆಸ್ ತ್ಯಜಿಸುವ ನಿರ್ಧಾರ ತಿಳಿಸಿದರು.

10 ಶಾಸಕರು ಪಕ್ಷಾಂತರ ಮಾಡಿರುವುದರಿಂದ ಸದನದಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಕೇವಲ ಐದಕ್ಕೆ ಇಳಿಯಲಿದೆ.

ಗೋವಾ ವಿಧಾನಸಭೆಯಲ್ಲಿ 17 ಶಾಸಕರನ್ನು ಹೊಂದಿರುವ ಬಿಜೆಪಿ ಅತಿ ದೊಡ್ಡ ಪಕ್ಷವಾಗಿದೆ. ಮೂವರು ಗೋವಾ ಫಾರ್ವರ್ಡ್ ಪಾರ್ಟಿ ಮತ್ತು ಮೂವರು ಪಕ್ಷೇತರರು ಹಾಗೂ ಎನ್‌ಸಿಪಿ ಮತ್ತು ಎಂಜಿಪಿಯ ತಲಾ ಒಬ್ಬ ಶಾಸಕರಿದ್ದಾರೆ.

ಈ ರಾಜಕೀಯ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಲು ಚಂದ್ರಕಾಂತ್ ನಿರಾಕರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.