ಪಣಜಿ: ತೆಹಲ್ಕಾದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ವಿರುದ್ಧ ಮಾಡಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ತೀರ್ಪನ್ನು ಇದೇ 19 ರಂದು ಪ್ರಕಟಿಸುವುದಾಗಿ ಗೋವಾದ ಸೆಷನ್ಸ್ ನ್ಯಾಯಾಲಯ ಬುಧವಾರ ತಿಳಿಸಿದೆ.

2013ರಲ್ಲಿ ಗೋವಾದ ಐಷಾರಾಮಿ ಹೋಟೆಲ್‌ನ ಲಿಫ್ಟ್‌ನೊಳಗೆ ಮಹಿಳಾ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ತರುಣ್ ಅವರ ಮೇಲಿದೆ.

ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಈ ಪ್ರಕರಣದ ಕುರಿತು ಏಪ್ರಿಲ್ 27ರಂದು ತೀರ್ಪು ಪ್ರಕಟಿಸಬೇಕಿತ್ತು. ಆದರೆ ನ್ಯಾಯಾಧೀಶರಾದ ಕ್ಷಮಾ ಜೋಶಿ ಅವರನ್ನು ತೀರ್ಪು ನೀಡುವ ದಿನಾಂಕವನ್ನು ಮೇ 12ಕ್ಕೆ ಮುಂದೂಡಿದ್ದರು.

ಕೋವಿಡ್–19ರ ಪಿಡುಗಿನ ಕಾರಣದಿಂದ ಸಿಬ್ಬಂದಿ ಕೊರತೆ ಎದುರಾಗಿದೆ. ನ್ಯಾಯಾಲಯವು ಕೇವಲ ಶೇ 15ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ. ಹೀಗಾಗಿ ತೇಜ್‌ಪಾಲ್ ಪ್ರಕರಣದ ತೀರ್ಪು ಪ್ರಕಟಿಸುವ ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ ಎಂದು ನ್ಯಾಯಾಲಯ ಬುಧವಾರ ತಿಳಿಸಿದೆ.

ಗೋವಾ ಪೊಲೀಸರು 2013ರ ನವೆಂಬರ್‌ನಲ್ಲಿ ತೇಜ್‌ಪಾಲ್ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಿದ್ದರು. ಅವರು 2014ರ ಮೇ ತಿಂಗಳಿನಿಂದ ಜಾಮೀನಿನ ಮೇಲೆ ಹೊರಗಿದ್ದಾರೆ. ಗೋವಾ ಅಪರಾಧ ವಿಭಾಗವು ಚಾರ್ಜ್‌ಶೀಟ್ ಸಲ್ಲಿಸಿತ್ತು.

ತನ್ನ ವಿರುದ್ಧದ ಆರೋಪಗಳಿಗೆ ತಡೆ ಕೋರಿ ತೇಜ್‌ಪಾಲ್ ಅವರು ಈ ಹಿಂದೆ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.