ಪಣಜಿ: ಗೋವಾದ ಕೃಷಿ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ರವಿ ನಾಯಕ್ ಅವರು ಹೃದಯಸ್ತಂಭನದಿಂದ ಬುಧವಾರ ಮೃತಪಟ್ಟಿದ್ದಾರೆ.

ನಾಯಕ್ (79) ಅವರು ಹುಟ್ಟೂರು ಖಡಪಬಂಧ್ನಲ್ಲಿ ಹೃದಯಸ್ತಂಭನಕ್ಕೆ ಒಳಗಾಗಿದ್ದರು. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನಾಯಕ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ನಾಯಕ್ ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಮೃತರ ಅಂತಿಮ ವಿಧಿವಿಧಾನ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆಯಿತು.

ಎರಡು ಬಾರಿ ಗೋವಾದ ಮುಖ್ಯಮಂತ್ರಿಯಾಗಿದ್ದ ನಾಯಕ್ ಅವರು, ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಹಲವು ವರ್ಷಗಳಿಂದ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಲ್ಲಿಯೂ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.