ಪಣಜಿ: ಉತ್ತರ ಗೋವಾದಲ್ಲಿರುವ ನೈಟ್ ಕ್ಲಬ್ ‘ಬರ್ಚ್ ಬೈ ರೋಮಿಯೊ ಲೇನ್’ನಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಬೆಂಕಿ ದುರಂತಕ್ಕೆ ಸಂಬಂಧಿಸಿ ನೈಟ್ ಕ್ಲಬ್ನ ಜನರಲ್ ಮ್ಯಾನೇಜರ್ ಸೇರಿದಂತೆ ನಾಲ್ವರು ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದ್ದು, ಒಂದು ವಾರದೊಳಗೆ ತನ್ನ ವರದಿಯನ್ನು ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ ಎಂದೂ ಸಾವಂತ್ ಹೇಳಿದ್ದಾರೆ.

ಗೋವಾ ರಾಜಧಾನಿ ಪಣಜಿಯಿಂದ 25 ಕಿ.ಮೀ ದೂರದಲ್ಲಿರುವ ಅರ್ಪೋರಾ ಗ್ರಾಮದಲ್ಲಿರುವ ನೈಟ್ಕ್ಲಬ್ ‘ಬರ್ಚ್ ಬೈ ರೋಮಿಯೊ ಲೇನ್’ನಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ 25 ಮಂದಿ ಸಜೀವ ದಹನವಾಗಿದ್ದು, ಆರು ಜನರು ಗಾಯಗೊಂಡಿದ್ದಾರೆ.

ಮೃತರಲ್ಲಿ ನಾಲ್ವರು ವಿದೇಶಿ ಪ್ರವಾಸಿಗರು, 14 ಮಂದಿ ಕ್ಲಬ್ನ ಸಿಬ್ಬಂದಿ ಸೇರಿದ್ದಾರೆ. ಇತರ ಏಳು ಜನರ ಗುರುತು ಪತ್ತೆಯಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲೂಥ್ರಾ ಹಾಗೂ ಗೌರವ್ ಲೂಥ್ರಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ಗೋವಾ ನೈಟ್ ಕ್ಲಬ್ ದುರಂತದಲ್ಲಿ 25 ಸಾವು: ರಾಷ್ಟ್ರಪತಿ ಮುರ್ಮು, PM ಮೋದಿ ಸಂತಾಪ.ಗೋವಾ ನೈಟ್ ಕ್ಲಬ್ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು.PHOTOS | ಗೋವಾ: ಮಸಣವಾಯ್ತು ನೈಟ್ ಕ್ಲಬ್; 25 ಮಂದಿ ಸಾವು .ಗೋವಾ ದುರಂತ | ಶವಗಳನ್ನು ತೆಗೆದುಕೊಂಡು ಏನು ಮಾಡೋದು?: ಮೃತರ ಸಂಬಂಧಿಕರ ಅಳಲು.Goa Nightclub Fire: ನ್ಯಾಯಾಂಗ ತನಿಖೆಗೆ ಆದೇಶ; ಮಾಲೀಕನ ವಿರುದ್ಧ ಎಫ್ಐಆರ್.Goa Nightclub Tragedy: ಡ್ಯಾನ್ಸ್ ಫ್ಲೋರ್ನಲ್ಲಿ ಕನಿಷ್ಠ 100 ಮಂದಿ ಇದ್ದರು!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.