ಪಣಜಿ: ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್ ಲುತ್ರಾ ಅವರನ್ನು ಥಾಯ್ಲೆಂಡ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಇಂದು (ಗುರುವಾರ) ತಿಳಿಸಿದ್ದಾರೆ.

ಡಿಸೆಂಬರ್ 6ರ ತಡರಾತ್ರಿ ಗೋವಾ ನೈಟ್ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ಅವಘಡದ ಬೆನ್ನಲ್ಲೇ ಲುತ್ರಾ ಸೋದರರು ಥಾಯ್ಲೆಂಡ್ಗೆ ಪರಾರಿಯಾಗಿದ್ದರು. ಸೌರಭ್ ಲುತ್ರಾ ಮತ್ತು ಗೌರವ್ ಲುತ್ರಾ ವಶಕ್ಕೆ ಪಡೆಯಲು ಇಂಟರ್ಪೋಲ್, ಬ್ಲ್ಯೂ ಕಾರ್ನರ್ ನೋಟಿಸ್ ಜಾರಿ ಮಾಡಿತ್ತು.
.ಪರಾರಿಯಾಗಿಲ್ಲ, ವ್ಯವಹಾರಕ್ಕಾಗಿ ಥಾಯ್ಲೆಂಡ್ಗೆ: ಗೋವಾ ನೈಟ್ಕ್ಲಬ್ ಮಾಲೀಕರು.ಗೋವಾ ಪಬ್ನಲ್ಲಿ ಅಗ್ನಿ ಅನಾಹುತ: ಲೂತ್ರಾಗೆ ಸೇರಿದ 2ನೇ ಕ್ಲಬ್ ಕೂಡಾ ನೆಲಸಮ.
ಭಾರತ ಸರ್ಕಾರದ ಕೋರಿಕೆಯ ಮೇರೆಗೆ ಲುತ್ರಾ ಸಹೋದರರನ್ನು ಥಾಯ್ಲೆಂಡ್ನ ಫುಕೆಟ್ನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳನ್ನು ಆದಷ್ಟು ಬೇಗನೇ ಭಾರತಕ್ಕೆ ಕರೆತರಲು ಪ್ರಯತ್ನ ನಡೆಯುತ್ತಿದೆ.

ಉತ್ತರ ಗೋವಾದ 'ಬರ್ಚ್ ಬೈ ರೋಮಿಯೊ ಲೇನ್' ನೈಟ್ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 25 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

ಪೊಲೀಸರು ಹಾಗೂ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದಾಗ ನೈಟ್ಕ್ಲಬ್ನ ಮಾಲೀಕರು ಭಾನುವಾರ (ಡಿ.7) ಮುಂಜಾನೆ ಇಂಡಿಗೊ ವಿಮಾನದ ಮೂಲಕ ಥಾಯ್ಲೆಂಡ್ಗೆ ಪರಾರಿಯಾಗಿದ್ದರು.

ಬಳಿಕ ಲುತ್ರಾ ಸೋದರರ ವಿರುದ್ದ ಬ್ಲ್ಯೂ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಸಿಬಿಐಗೆ ಗೋವಾ ಪೊಲೀಸರು ಮನವಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.