ಪಣಜಿ: ಉತ್ತರ ಗೋವಾದ ಬರ್ಚ್ ಬೈ ರೋಮಿಯೋ ಲೇನ್ ನೈಟ್ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕ್ಲಬ್ನ ಮಾಲೀಕರಾದ ಸೌರಭ್ ಹಾಗೂ ಗೌರವ್ ಲೂಥ್ರಾ ಸಹೋದರರಿಗೆ ಮಪುಸಾದ ಸೆಷನ್ಸ್ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದ್ವಿಜಪಲ್ ಪಟ್ಕರ್ ಅವರು ಬೆಂಕಿ ಅವಘಡದ ಪ್ರಕರಣದಲ್ಲಿ ಸೌರಭ್ ಮತ್ತು ಗೌರವ್ ಇಬ್ಬರಿಗೂ ಷರತ್ತುಬದ್ಧ ಜಾಮೀನು ನೀಡಿದ್ದಾರೆ ಎಂದು ವಕೀಲ ಪರಾಗ್ ರಾವ್ ತಿಳಿಸಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿದ ಮತ್ತೊಂದು ಪ್ರಕರಣದಲ್ಲಿಯೂ ಲೂಥ್ರಾ ಸಹೋದರರನ್ನು ಬಂಧಿಸಲಾಗಿರುವುದರಿಂದ ಅಗ್ನಿ ದುರಂತ ಪ್ರಕರಣದಲ್ಲಿ ಜಾಮೀನು ದೊರಕಿದರೂ ಇಬ್ಬರನ್ನೂ ಜೈಲಿನಿಂದ ಬಿಡುಗಡೆ ಮಾಡಿಲ್ಲ.

ಆರೋಗ್ಯ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ (ಎನ್ಒಸಿ) ಮತ್ತು ಅಬಕಾರಿ ಪರವಾನಗಿ ಪಡೆಯಲು ದಾಖಲೆಗಳನ್ನು ನಕಲು ಮಾಡಿದ ಆರೋಪ ಲೂಥ್ರಾ ಸಹೋದರರ ಮೇಲಿದೆ. ಕಳೆದ ವಾರ ಈ ಪ್ರಕರಣದಲ್ಲಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಪ್ರಸ್ತುತ ನ್ಯಾಯಾಲಯವು ಇವರನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

2025ರ ಡಿಸೆಂಬರ್ 6ರಂದು ಗೋವಾದ ಅರ್ಪೋರಾ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ‘ಬರ್ಚ್ ಬೈ ರೋಮಿಯೊ ಲೇನ್ ನೈಟ್ ಕ್ಲಬ್’ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು 25 ಮಂದಿ ಸಾವಿಗೀಡಾಗಿದ್ದರು. ಘಟನೆ ಬಳಿಕ ಕ್ಲಬ್ನ ಮಾಲೀಕರಾದ ಸೌರಭ್ ಮತ್ತು ಗೌರವ್ ಥಾಯ್ಲೆಂಡ್ಗೆ ಪರಾರಿಯಾಗಿದ್ದರು. ಅವರನ್ನು ಡಿ.17ರಂದು ಭಾರತಕ್ಕೆ ಗಡೀಪಾರು ಮಾಡಲಾಯಿತು. ಆ ಬಳಿಕ ಗೋವಾ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು.

ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಸೌರಭ್, ಗೌರವ್, ಅಜಯ್ ಗುಪ್ತಾ ಸೇರಿದಂತೆ ಒಟ್ಟು 13 ಜನರ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಅಜಯ್ ಗುಪ್ತಾಗೆ ಕಳೆದ ತಿಂಗಳು ಮಪುಸಾದ ನ್ಯಾಯಾಲಯವು ಜಾಮೀನು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.