ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಪ್ರದೇಶ | ಗುಡ್ಡ ಕುಸಿತ: ಹಳಿ ತಪ್ಪಿದ ಗೂಡ್ಸ್‌ ರೈಲು

Published : 16 ಸೆಪ್ಟೆಂಬರ್ 2024, 10:00 IST
Last Updated : 16 ಸೆಪ್ಟೆಂಬರ್ 2024, 10:00 IST
ಫಾಲೋ ಮಾಡಿ
Comments

ಸೋನಭದ್ರ: ಗುಡ್ಡ ಕುಸಿತದ ಅವಶೇಷಗಳಿಗೆ ಡಿಕ್ಕಿ ಹೊಡೆದು ಗೂಡ್ಸ್ ರೈಲಿನ ಎಂಜಿನ್‌ ಹಳಿ ತಪ್ಪಿರುವ ಘಟನೆ ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು ರೈಲ್ವೆ ಹಳಿಯ ಮೇಲೆ ಬಿದ್ದಿದೆ. ಅವಶೇಷಗಳನ್ನು ತೆರವುಗೊಳಿಸಲಾಗಿದ್ದು, ರೈಲು ಸಂಚಾರ ಪುನರಾರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.

‘ಸೋನಭದ್ರ ಜಿಲ್ಲೆಯ ಚುನಾರ್‌ನಿಂದ ಚೋಪನ್‌ಗೆ ತೆರಳುತ್ತಿದ್ದ ರೈಲು ಇಂದು (ಸೋಮವಾರ) ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬ್ರಹ್ಮಬಾಬಾ ಸೇತುವೆಯ ಬಳಿ ಗುಡ್ಡ ಕುಸಿತದ ಅವಶೇಷಗಳಿಗೆ ಡಿಕ್ಕಿ ಹೊಡೆದಿದ್ದು, ರೈಲಿನ ಎಂಜಿನ್‌ ಹಳಿ ತಪ್ಪಿದೆ’ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣವೇ ರೈಲ್ವೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಮತ್ತು ದುರಸ್ತಿ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಎಂಜಿನ್‌ ಹಳಿ ತಪ್ಪಿದ ಕಾರಣ ಗೂಡ್ಸ್‌ ರೈಲನ್ನು ಚುನಾರ್‌ ಬಳಿ ನಿಲ್ಲಿಸಲಾಗಿದೆ. ಜಮ್ಮುತಾವಿ ಎಕ್ಸ್‌ಪ್ರೆಸ್‌ ರೈಲಿನ ಮಾರ್ಗ ಬದಲಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT