ನವದೆಹಲಿ: ಜೂನ್ 21ರಂದು ನಡೆಯಲಿರುವ ನೀಟ್–ಯುಜಿ ಮರು ಪರೀಕ್ಷೆಯನ್ನು ಶೇ 100ರಷ್ಟು ದೋಷರಹಿತವಾಗಿ ನಡೆಸಲು, ಭಾರತೀಯ ವಾಯುಪಡೆಯ (ಐಎಎಫ್) ನೆರವು ಪಡೆದುಕೊಳ್ಳಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ಹೇಳಿವೆ. ಐಎಎಫ್ ವಿಮಾನದ ಮೂಲಕ ಪ್ರಶ್ನೆಪತ್ರಿಕೆ ಸಾಗಿಸುವ ಸಾಧ್ಯತೆಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಗುರುವಾರ ನಡೆದ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ಈ ಸಾಧ್ಯತೆಯನ್ನು ಚರ್ಚಿಸಲಾಗಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಸಂಪರ್ಕ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ, ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಅಂತಿಮವಾಗಿ ಈ ಸಾಧ್ಯತೆಯನ್ನು ಪ್ರಧಾನಿ ಮುಂದೆ ಇಡಲಾಗುವುದು, ಅವರು ನಿರ್ಧಾರ ಕೈಗೊಳ್ಳುವರು’ ಎಂದು ಮೂಲಗಳು ಹೇಳಿವೆ.

ನೀಟ್–ಯುಜಿ ಮರು ಪರೀಕ್ಷೆಯ ಸಿದ್ಧತೆ, ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಶಿಕ್ಷಕರ ತಂಡ, ಮುದ್ರಣ, ಪರೀಕ್ಷಾ ಕೇಂದ್ರಗಳಿಗೆ ರವಾನೆ, ಭದ್ರತೆ ವಿಷಯಗಳ ಬಗ್ಗೆ ಪ್ರಧಾನಿ ನೇರವಾಗಿ ನಿಗಾ ವಹಿಸುತ್ತಿದ್ದಾರೆ. ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತದ ಬಗ್ಗೆಯೂ ಅವರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಮೇ 3ರಂದು ನಡೆದಿದ್ದ ನೀಟ್–ಯುಜಿ ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಕಾರಣ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ರದ್ದುಪಡಿಸಿತ್ತು. ಈ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ. 23ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.