ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ: ಜಮಾತ್‌–ಇ–ಇಸ್ಲಾಮಿ ಮೇಲಿನ ನಿಷೇಧ 5 ವರ್ಷ ವಿಸ್ತರಣೆ

Published 27 ಫೆಬ್ರುವರಿ 2024, 14:48 IST
Last Updated 27 ಫೆಬ್ರುವರಿ 2024, 14:48 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಜಮಾತ್‌–ಇ–ಇಸ್ಲಾಮಿ ಸಂಘಟನೆಯ ನಿಷೇಧವನ್ನು ಮುಂದಿನ ಐದು ವರ್ಷಗಳ ಕಾಲ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ’ ಎಂದು ಕೇಂದ್ರ ಸಚಿವ ಅಮಿತ್‌ ಶಾ ಅವರು ಮಂಗಳವಾರ ತಿಳಿಸಿದ್ದಾರೆ.

ಸಂಘಟನೆಯ ಮೂಲಕ ದೇಶದ ಭದ್ರತೆ, ದೇಶದ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಕೆಲಸಗಳು ಮುಂದುವರಿದ ಕಾರಣ ನಿಷೇಧವನ್ನು ಮುಂದುವರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡ ಅಮಿತ್‌ ಶಾ, ‘ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದದ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸುವ ಸರ್ಕಾರವು  ಜಮ್ಮು ಕಾಶ್ಮೀರದಲ್ಲಿ ಜಮಾತ್‌–ಇ–ಇಸ್ಲಾಮಿ ಸಂಘಟನೆಯ ಮೇಲಿನ ನಿಷೇಧವನ್ನು ಐದು ವರ್ಷಗಳವರೆಗೆ ವಿಸ್ತರಿಸಿದೆ’ ಎಂದು ಬರೆದುಕೊಂಡಿದ್ದಾರೆ.

2019ರ ಫೆಬ್ರುವರಿ 28ರಂದು ಮೊದಲ ಬಾರಿಗೆ ಈ ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT