ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್‌ ಅಕ್ರಮ ಸಿಬಿಐಗೆ | ಸರ್ಕಾರದಿಂದ ಸರಿಯಾದ ಕ್ರಮ: ಎಚ್‌. ಡಿ ದೇವೇಗೌಡ

Published 28 ಜೂನ್ 2024, 10:32 IST
Last Updated 28 ಜೂನ್ 2024, 10:32 IST
ಅಕ್ಷರ ಗಾತ್ರ

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಕೇಂದ್ರ ಸರ್ಕಾರ ಸರಿಯಾದ ನಿರ್ಧಾರ ಕೈಗೊಂಡಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಹೇಳಿದ್ದಾರೆ.

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ ಅಕ್ರಮಗಳ ಕುರಿತು ರಾಜ್ಯಸಭೆಯಲ್ಲಿ ಉಂಟಾದ ಗದ್ದಲದ ನಡುವೆ ಮಾತನಾಡಿದ ಅವರು, ಈ ಪ್ರಕರಣ ಕುರಿತು ತನಿಖೆ ಪೂರ್ಣಗೊಳ್ಳುವವರೆಗೆ ಇದರ ಹೊಣೆಗಾರಿಕೆಯನ್ನು ಸರ್ಕಾರ ಹೊರಲು ಸಾಧ್ಯವಿಲ್ಲ ಎಂದು ಹೇಳಿದರು. ಸದನ ಸುಗಮವಾಗಿ ನಡೆಯಲು ಅವಕಾಶ ನೀಡುವಂತೆ ವಿರೋಧ ಪಕ್ಷಗಳನ್ನು ಮನವಿ ಮಾಡಿದರು.

ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಸಂದರ್ಭದಲ್ಲಿ ನೀಟ್‌ ಅಕ್ರಮಗಳ ಕುರಿತ ಚರ್ಚೆಗೆ ಆಗ್ರಹಿಸಿದ ವಿರೋಧಪಕ್ಷಗಳ ಸದಸ್ಯರು, ಘೋಷಣೆಗಳನ್ನು ಕೂಗುತ್ತ ಸದನದ ಬಾವಿಗಿಳಿದಿದ್ದರಿಂದ ರಾಜ್ಯಸಭೆ ಗೊಂದಲದ ದೃಶ್ಯಗಳಿಗೆ ಸಾಕ್ಷಿಯಾಯಿತು.

ಚರ್ಚೆಯ ನಡುವೆ ಮಧ್ಯಪ್ರವೇಶಿಸಿ ಮಾತನಾಡಿದ ದೇವೇಗೌಡ, ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆ. ನಾನು ಯಾವುದೇ ಪಕ್ಷದ ಹೆಸರು ತೆಗೆದುಕೊಳ್ಳಲು ಬಯಸುವುದಿಲ್ಲ. ಈ ಪ್ರಕರಣ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಿ ಸರ್ಕಾರ ಸರಿಯಾದ ನಿರ್ಧಾರ ಕೈಗೊಂಡಿದೆ. ಈ ವಿಷಯದಲ್ಲಿ ತನಿಖೆ ಇನ್ನೂ ಪೂರ್ಣಗೊಂಡಿಲ್ಲ, ಪೂರ್ಣಗೊಳ್ಳುವವರೆಗೆ ಸರ್ಕಾರ ಇದರ ಹೊಣೆಗಾರಿಕೆಯನ್ನು ಹೊರಲು ಸಾಧ್ಯವಿಲ್ಲ. ಆದ್ದರಿಂದ ಸದನ ಸುಗಮವಾಗಿ ನಡೆಸಲು ಅವಕಾಶ ನೀಡುವಂತೆ ಪ್ರತಿಪಕ್ಷಗಳನ್ನು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT