ಪಣಜಿ: ಗೋವಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣಕ್ಕೆ ಜೂನ್ 7ರವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಕಚೇರಿ ಮೂಲಗಳು ತಿಳಿಸಿವೆ.

‘ಜೂನ್ 7ರ ಬೆಳಿಗ್ಗೆ 7 ಗಂಟೆಯವರೆಗೆ ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಆದಕ್ಕೆ ಸಂಬಂಧಿಸಿದ ಆದೇಶಗಳನ್ನು ಆಯಾ ಜಿಲ್ಲಾಧಿಕಾರಿಗಳು ಹೊರಡಿಸಬೇಕು’ ಎಂದು ಗೋವಾ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

ಗೋವಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ ಮೇ 3ರಿಂದ ಮೇ 23 ರವರೆಗೆ ಲಾಕ್‌ಡೌನ್ ಘೋಷಿಸಲಾಗಿತ್ತು. ಬಳಿಕ ಮೇ 31ರವರೆಗೆ ಲಾಕ್‌ಡೌನ್ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು.

ಅಗತ್ಯ ವಸ್ತುಗಳು ಖರೀದಿ ಹಾಗೂ ಮದ್ಯ ಮಾರಾಟಕ್ಕೆ ಬೆಳಿಗ್ಗೆ 7ರಿಂದ ಮಧ್ಯಾಹ್ನ 1 ರವರೆಗೆ ಅನುಮತಿ ನೀಡಲಾಗಿದೆ.

ಗೋವಾದಲ್ಲಿ ಇದುವರೆಗೆ 1.53 ಲಕ್ಷ ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಆ ಪೈಕಿ 2,570 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಸದ್ಯ ಗೋವಾದಲ್ಲಿ 15,326 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ... ಜೂನ್ 7ರವರೆಗಿನ ಸ್ಥಿತಿ ಅವಲೋಕಿಸಿ ಲಾಕ್‌ಡೌನ್ ವಿಸ್ತರಣೆ ತೀರ್ಮಾನ: ಯಡಿಯೂರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.