ನವದೆಹಲಿ:ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಕಟಣೆಗಳನ್ನು ಸ್ಥಳೀಯ ಭಾಷೆಗಳಲ್ಲೂ ಹೊರಡಿಸಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯ ಆದೇಶಿಸಿದೆ.
ಈಗ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಮಾತ್ರ ಪ್ರಕಟಣೆಗಳನ್ನು ಮಾಡಲಾಗುತ್ತಿದೆ. ಈ ಆದೇಶದ ಪ್ರಕಾರ ಇನ್ನು ಮುಂದೆ ಆಯಾ ವಿಮಾನ ನಿಲ್ದಾಣವಿರುವ ರಾಜ್ಯದ ಸ್ಥಳೀಯ ಭಾಷೆಯಲ್ಲೂ ಪ್ರಕಟಣೆ ಮಾಡಬೇಕಾಗುತ್ತದೆ.
ಈ ಸಂಬಂಧ ಆದೇಶದ ಪತ್ರವನ್ನು ಎಲ್ಲಾ ವಿಮಾನ ನಿಲ್ದಾಣಗಳಿಗೂ ರವಾನಿಸಲಾಗಿದೆ.