ನವದೆಹಲಿ: ತಮ್ಮ ಉತ್ತರಾಧಿಕಾರಿಯಾಗಿ ಯಾರನ್ನು ನೇಮಕ ಮಾಡಬೇಕು ಎಂದು ಶಿಫಾರಸು ಮಾಡುವಂತೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಉದಯ್ ಉಮೇಶ್ ಲಲಿತ್ ಅವರಿಗೆ ಕೇಂದ್ರ ಸರ್ಕಾರವು ಶುಕ್ರವಾರ ಪತ್ರ ಬರೆದಿದೆ.

ಸಿಜೆಐ ಆಗಿ 74 ದಿನಗಳ ಸೇವಾವಧಿ ಪೂರ್ಣಗೊಳಿಸಿ ನವೆಂಬರ್ 8ರಂದು ಲಲಿತ್ ಅವರು ನಿವೃತ್ತರಾಗಲಿದ್ದಾರೆ.

‘ಮುಂದಿನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡುವಂತೆ ಕೇಂದ್ರ ಕಾನೂನು ಸಚಿವರು ಲಲಿತ್ ಅವರಿಗೆ ಪತ್ರ ಬರೆದಿದ್ದಾರೆ’ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಟ್ವೀಟ್ ಮಾಡಿದೆ.

‘ನ್ಯಾಯಾಂಗ ನೇಮಕಾತಿ ನಿಯಮಾವಳಿ’(ಎಂಒಪಿ) ಪ್ರಕಾರ ಅತ್ಯಂತ ಹಿರಿಯ ನ್ಯಾಯಮೂರ್ತಿಯನ್ನು ಸಿಜೆಐ ಆಗಿ ಶಿಫಾರಸು ಮಾಡಲಾಗುತ್ತದೆ.

ಲಲಿತ್ ಅವರ ನಂತರ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.