ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಶಾಲಾ: ಸರ್ಕಾರಿ ಕಟ್ಟಡದ ಮೇಲೆ ‘ಖಾಲಿಸ್ತಾನ್‌ ಜಿಂದಾಬಾದ್‌’ ಬರಹ

Published 4 ಅಕ್ಟೋಬರ್ 2023, 10:05 IST
Last Updated 4 ಅಕ್ಟೋಬರ್ 2023, 10:05 IST
ಅಕ್ಷರ ಗಾತ್ರ

ನವದೆಹಲಿ: ಧರ್ಮಶಾಲಾದಲ್ಲಿರುವ ಜಲ ಶಕ್ತಿ ಇಲಾಖೆಯ ಕಟ್ಟಡದ ಗೋಡೆಯ ಮೇಲೆ ‘ಖಾಲಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆಗಳನ್ನು ಬರೆಯಲಾಗಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

‘ಕೆಲವು ಕಿಡಿಗೇಡಿಗಳು ‘ಖಾಲಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಬರೆದಿರುವುದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಕಾಂಗ್ರಾದ ಪೊಲೀಸ್ ವರಿಷ್ಠಾಧಿಕಾರಿ ಶಾಲಿನಿ ಅಗ್ನಿಹೋತ್ರಿ ತಿಳಿಸಿದ್ದಾರೆ.

ಘಟನಾಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಗೋಡೆ ಮೇಲೆ ಬರೆದಿದ್ದ ‘ಖಾಲಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಅಳಿಸಿ ಹಾಕಿದ್ದಾರೆ.

ಇದೇ ತಿಂಗಳು ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ ಕ್ರಿಕೆಟ್ ಟೂರ್ನಿಯ ಐದು ಪಂದ್ಯಗಳು ಧರ್ಮಶಾಲಾದಲ್ಲಿ ನಿಗದಿಯಾಗಿದ್ದು, ಪ್ರವಾಸಿ ತಂಡಗಳ ಆಟಗಾರರು ನಗರಕ್ಕೆ ಬಂದಿರುವ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆ ಆತಂಕಕ್ಕೆ ಕಾರಣವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT