ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ

Last Updated 28 ಜೂನ್ 2021, 9:58 IST
ಅಕ್ಷರ ಗಾತ್ರ

ನವದೆಹಲಿ: ‘ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌ ಅವರ ಅಧಿಕಾರಾವಧಿಯನ್ನು ಒಂದು ವರ್ಷ ಕಾಲ ವಿಸ್ತರಿಸಲು ಕೇಂ‌ದ್ರ ಸರ್ಕಾರ ನಿರ್ಧರಿಸಿದೆ’ ಎಂದು ಮೂಲಗಳು ತಿಳಿಸಿವೆ.

ಅಟಾರ್ನಿ ಜನರಲ್‌ ಸಾಮಾನ್ಯವಾಗಿ ಮೂರು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ. ಕಳೆದ ವರ್ಷ ವೇಣುಗೋಪಾಲ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳಬೇಕಾಗಿತ್ತು. ಆದರೆ ತಮ್ಮ ವಯಸ್ಸನ್ನು ಗಮನದಲ್ಲಿಟ್ಟುಕೊಂಡು ಒಂದು ವರ್ಷ ಅಧಿಕಾರಾವಧಿಯನ್ನು ವಿಸ್ತರಿಸುವಂತೆ ವೇಣುಗೋಪಾಲ್‌ ಅವರು ಮನವಿ ಮಾಡಿದ್ದರು.

‘ಸುಪ್ರೀಂಕೋರ್ಟ್‌ನಲ್ಲಿ ಅವರು ನಿರ್ವಹಿಸುತ್ತಿರುವ ಉನ್ನತ ಮಟ್ಟದ ಪ್ರಕರಣಗಳು ಮತ್ತು ಬಾರ್‌ ಅಸೋಸಿಯೇಷನ್‌ನಲ್ಲಿ ಅವರ ಅನುಭವವನ್ನು ಪರಿಗಣಿಸಿ, ಅವರ ಅಧಿಕಾರಾವಧಿಯನ್ನು ಇನ್ನೂ ಒಂದು ವರ್ಷ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ.ಆದಷ್ಟು ಶೀಘ್ರ ಅಧಿಕೃತ ಆದೇಶ ಹೊರ ಬೀಳಲಿದೆ ಎಂದು ಮೂಲಗಳು ಹೇಳಿವೆ.

ಅವರು ಈಗಿನ ಅಧಿಕಾರದ ಅವಧಿ ಮುಂದಿನ ಒಂದೆರಡು ದಿನಗಳಲ್ಲಿ ಮುಕ್ತಾಯಗೊಳ್ಳಲಿದೆ.

ವೇಣುಗೋಪಾಲ್‌ ಅವರು 2017ರ ಜುಲೈ 1ರಂದು ಅಟಾರ್ನಿ ಜನರಲ್‌ ಆಗಿ ಅಧಿಕಾರ ಸ್ವೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT