ನವದೆಹಲಿ: ಕೆಲವೊಂದು ಅನಿರೀಕ್ಷಿತ ಬೆಳವಣಿಗೆಗಳಿಂದಾಗಿ ಜನವರಿ 17ರಂದು ದೇಶದಾದ್ಯಂತ ನಡೆಯಬೇಕಿದ್ದ ‘ಪಲ್ಸ್ ಪೋಲಿಯೊ  ಲಸಿಕೆ’ ಕಾರ್ಯಕ್ರಮವನ್ನು ಮುಂದಿನ ಸೂಚನೆಯವರೆಗೂ ಮುಂದೂಡಲು ನಿರ್ಧರಿಸಿರುವುದಾಗಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಸಂಬಂಧ ಜನವರಿ 9ರಂದು ಎಲ್ಲ ರಾಜ್ಯ ಸರ್ಕಾರಗಳ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ. ಪತ್ರದಲ್ಲಿ ಮುಂದಿನ ಸೂಚನೆ ಬರುವವರೆಗೂ, ಜ.17 ಪಲ್ಸ್ ಪೋಲಿಯೊ ಕಾರ್ಯಕ್ರಮ ಮುಂದೂಡುವಂತೆ ಸೂಚಿಸಿದೆ.

ಪ್ರತಿ ವರ್ಷ ಜ.17ರಂದು ದೇಶದಾದ್ಯಂತ ರಾಷ್ಟ್ರೀಯ ರೋಗನಿರೋಧಕ ದಿನ(ಎನ್‌ಐಡಿ) ಅಥವಾ ಪಲ್ಸ್ ಪೋಲಿಯೊ  ರೋಗನಿರೋಧಕ ಕಾರ್ಯಕ್ರಮದ ಅಂಗವಾಗಿ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ.

ಆದರೆ, ಈ ವರ್ಷ ಕೆಲವೊಂದು ಅನಿರೀಕ್ಷಿತ ಬೆಳವಣಿಗೆಗಳು ನಡೆದಿರುವ ಹಿನ್ನೆಲೆಯಲ್ಲಿ ಮುಂದಿನ ಸೂಚನೆವರೆಗೂ ಈ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯ ಸರ್ಕಾರಗಳ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ.

ಆರೋಗ್ಯ ಸಚಿವ ಹರ್ಷವರ್ಧನ್ ಅವರು ‘ಜನವರಿ 17ರಿಂದ ಮೂರು ದಿನಗಳ ಕಾಲ ದೇಶದಾದ್ಯಂತ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ನಡೆಯಲಿದೆ‘ ಎಂದು ಜ.8ರಂದು ತಿಳಿಸಿದ್ದರು. ಈಗ ಕೆಲವೊಂದು ಅನಿರೀಕ್ಷಿತ ಬೆಳವಣಿಗೆಗಳಿಂದಾಗಿ, ಆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.