ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid–19: ಅಂತರರಾಷ್ಟ್ರೀಯ ಪ್ರಯಾಣಿಕರ ಮಾರ್ಗಸೂಚಿಗಳು ಮತ್ತಷ್ಟು ಸಡಿಲ

Published 19 ಜುಲೈ 2023, 13:27 IST
Last Updated 19 ಜುಲೈ 2023, 13:27 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯವು ಅಂತರರಾಷ್ಟ್ರೀಯ ಪ್ರಯಾಣಿಕರಿಗಾಗಿ ಕೋವಿಡ್‌–19 ಮಾರ್ಗಸೂಚಿಗಳನ್ನು ಮತ್ತಷ್ಟು ಸಡಿಲಿಸಿದೆ. ಹೊಸ ಮಾರ್ಗಸೂಚಿಗಳು ಇದೇ 20ರ ಮಧ್ಯರಾತ್ರಿಯಿಂದ ಜಾರಿಗೆ ಬರಲಿವೆ.

ವಿದೇಶಗಳಿಂದ ಬಂದಿಳಿಯುವವರ ಪೈಕಿ ಶೇ 2ರಷ್ಟು ಪ್ರಯಾಣಿಕರು ಆರ್‌ಟಿಪಿಸಿಆರ್‌ ಪರೀಕ್ಷೆಗೆ ಒಳಗಾಗಬೇಕು ಎಂಬ ನಿಬಂಧನೆಯನ್ನು ಸಹ ಕೈಬಿಡಲಾಗಿದೆ.

ದೇಶದಲ್ಲಿ ಕೋವಿಡ್–19 ಪರಿಸ್ಥಿತಿಯ ಅವಲೋಕನ ಹಾಗೂ ಜಾಗತಿಕವಾಗಿ ಕೋವಿಡ್‌ ಲಸಿಕೆ ಕಾರ್ಯಕ್ರಮ ವ್ಯಾಪಕವಾಗಿ ಅನುಷ್ಠಾನಗೊಳಿಸಿರುವ ಹಿನ್ನೆಲೆಯಲ್ಲಿ ಸಚಿವಾಲಯ ಈ ಕ್ರಮ ಕೈಗೊಂಡಿದೆ.

ಕೋವಿಡ್‌–19ಗೆ ಸಂಬಂಧಿಸಿ ಅಂತರರಾಷ್ಟ್ರೀಯ ಪ್ರಯಾಣಿಕರು ಹಾಗೂ ವಿಮಾನಯಾನ ಸಂಸ್ಥೆಗಳಿಗಾಗಿ ಈಗಾಗಲೇ ಸೂಚಿಸಿರುವ ಮುನ್ನೆಚ್ಚರಿಕೆ ಕ್ರಮಗಳು ಅನ್ವಯಿಸಲಿವೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT