ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಿಮಿ’ ನಿಷೇಧ: ಐದು ವರ್ಷ ವಿಸ್ತರಣೆ

Published 29 ಜನವರಿ 2024, 13:58 IST
Last Updated 29 ಜನವರಿ 2024, 13:58 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಭಯೋತ್ಪಾದನೆ ಉತ್ತೇಜಿಸುವ ಮುತ್ತು ಶಾಂತಿ, ಕೋಮು ಸೌಹಾರ್ದ ಕದಡುವಲ್ಲಿ ತೊಡಗಿರುವ ಭಯೋತ್ಪಾದಕ ಸಂಘಟನೆ ‘ಸ್ಟೂಡೆಂಟ್ಸ್ ಇಸ್ಲಾಮಿಕ್‌ ಮೂವ್‌ಮೆಂಟ್‌ ಆಫ್‌ ಇಂಡಿಯಾ’ (ಸಿಮಿ) ಮೇಲೆ ವಿಧಿಸಲಾಗಿರುವ ನಿಷೇಧವನ್ನು ಕೇಂದ್ರ ಸರ್ಕಾರ ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಿ ಸೋಮವಾರ ಆದೇಶ ಹೊರಡಿಸಿದೆ.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ‘ಸಿಮಿ’ಯನ್ನು ಮುಂದಿನ ಐದು ವರ್ಷಗಳವರೆಗೆ ‘ಕಾನೂನುಬಾಹಿರ ಸಂಘ’ ಎಂದು ಘೋಷಿಸಲಾಗಿದೆ ಎಂದು ಗೃಹ ಸಚಿವ ಅಮಿತ್‌ ಶಾ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಅಟಲ್‌ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ 2001ರಲ್ಲಿ ‘ಸಿಮಿ’ ಸಂಘಟೆನೆಯನ್ನು ಮೊದಲ ಬಾರಿಗೆ ನಿಷೇಧಿಸಲಾಯಿತು. ಆಗಿನಿಂದ ಪ್ರತಿ ಐದು ವರ್ಷಗಳಿಗೊಮ್ಮೆ ನಿಷೇಧವನ್ನು ವಿಸ್ತರಿಸಲಾಗುತ್ತಿದೆ.

‘ಸಿಮಿ’ ತನ್ನ ವಿಧ್ವಂಸಕ ಕೃತ್ಯಗಳನ್ನು ಮುಂದುವರಿಸಿದೆ ಮತ್ತು ತಲೆಮರೆಸಿಕೊಂಡಿರುವ ತನ್ನ ಕಾರ್ಯಕರ್ತರನ್ನು ಪುನಃ ಸಂಘಟಿಸುತ್ತಿದೆ ಎಂದು ಗೃಹ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT