ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೇನಾ ಮುಖ್ಯಸ್ಥ ಮನೋಜ್‌ ಪಾಂಡೆ ಸೇವಾವಧಿ ವಿಸ್ತರಣೆ

Published 26 ಮೇ 2024, 13:47 IST
Last Updated 26 ಮೇ 2024, 13:47 IST
ಅಕ್ಷರ ಗಾತ್ರ

ನವದೆಹಲಿ: ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ ಅವರ ಸೇವಾ ಅವಧಿಯನ್ನು ಸರ್ಕಾರ ಒಂದು ತಿಂಗಳ ಕಾಲ ವಿಸ್ತರಿಸಿದೆ.

ಮೇ 31ರಂದು ಜನರಲ್ ಪಾಂಡೆ ಅವರು ನಿವೃತ್ತರಾಗಬೇಕಿತ್ತು, ಆದರೆ, ಜೂನ್‌ 30ರವರೆಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

‘ಸೇನಾ ನಿಯಮಾವಳಿಗಳ ಅಡಿಯಲ್ಲಿ ಜನರಲ್‌ ಪಾಂಡೆ ಅವರ ಸೇವಾ ಅವಧಿಯನ್ನು ವಿಸ್ತರಿಸಲು ಸಚಿವ ಸಂಪುಟದ ನೇಮಕಾತಿ ಸಮಿತಿಯು ಅನುಮತಿ ನೀಡಿದೆ’ ಎಂದು ರಕ್ಷಣಾ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT