ಲಖನೌ (ಪಿಟಿಐ): ‘ಭಾರತವು ಜಗತ್ತಿನಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಕೇಂದ್ರ ಸರ್ಕಾರದ ವೈಫಲ್ಯ ಕಾರಣ’ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಗುರುವಾರ ಟೀಕಿಸಿದ್ದಾರೆ.

‘ಇದು ಆತಂಕಕಾರಿ ಸುದ್ದಿ. ಇದಕ್ಕೆ ಕಾರಣ ಸರ್ಕಾರದ ವೈಫಲ್ಯ’ ಎಂದು ಅಖಿಲೇಶ್ ಟ್ವೀಟ್ ಮಾಡಿದ್ದಾರೆ.

‘ಬಡತನ ಹಾಗೂ ನಿರುದ್ಯೋಗದಿಂದ ತತ್ತರಿಸಿರುವ ಜನರು, ತಾವು ಮಾಡುವ ಕೆಲಸಕ್ಕೆ ನೆರವಾಗಲಿ ಹಾಗೂ ಕುಟುಂಬಕ್ಕೆ ಆಧಾರವಾಗಿರಲಿ ಎಂದು ಹೆಚ್ಚೆಚ್ಚು ಮಕ್ಕಳನ್ನು ಪಡೆಯುತ್ತಿದ್ದಾರೆ. ವೈದ್ಯಕೀಯ ಸೌಕರ್ಯಗಳ ಕೊರತೆಯಿಂದಾಗಿ ಜನ ತಮ್ಮ ಮಕ್ಕಳ ಮರಣದ ಭಯದಲ್ಲಿದ್ದಾರೆ. ಗರ್ಭನಿರೋಧಕ ಸಾಧನಗಳನ್ನು ಸಮರ್ಪಕವಾಗಿ ವಿತರಿಸುವಲ್ಲಿ ಸರ್ಕಾರವೂ ವಿಫಲವಾಗಿದೆ’ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.