ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಕಿಪಾಕ್ಸ್: ತ್ವರಿತ ಪತ್ತೆ, ಪ್ರತ್ಯೇಕ ವಾಸಕ್ಕೆ ಮಾರ್ಗಸೂಚಿ ಪ್ರಕಟ

ಕೆಲ ದೇಶಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಳ * ಕೇಂದ್ರದಿಂದ ಹೊಸ ಮಾರ್ಗಸೂಚಿಗಳ ಬಿಡುಗಡೆ
Last Updated 31 ಮೇ 2022, 20:08 IST
ಅಕ್ಷರ ಗಾತ್ರ

ನವದೆಹಲಿ: ಹಲವು ದೇಶಗಳಲ್ಲಿ ಮಂಕಿಪಾಕ್ಸ್‌ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಪ್ರಸರಣಕ್ಕೆ ಕಡಿವಾಣ ಹಾಕುವುದಕ್ಕಾಗಿ ಕೇಂದ್ರ ಸರ್ಕಾರ ಮಂಗಳವಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

‘ಜಿಲ್ಲಾ ಮಟ್ಟದಲ್ಲಿ ತೀವ್ರ ನಿಗಾ ವಹಿಸಬೇಕು. ಒಂದೇ ಒಂದು ಪ್ರಕರಣ ಕಂಡುಬಂದರೂ ‘ಸಮಗ್ರ ರೋಗ ನಿಗಾ ಕಾರ್ಯಕ್ರಮ’ದಡಿ ಪತ್ತೆ ಕಾರ್ಯ ಹಾಗೂ ಸೋಂಕಿತರ ಪ್ರತ್ಯೇಕವಾಸಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಈ ಸಂಬಂಧ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಪತ್ರ ಬರೆದಿದೆ. ‘ಮಂಕಿಪಾಕ್ಸ್‌ ಪ್ರಕರಣಗಳನ್ನು ತ್ವರಿತವಾಗಿ ಪತ್ತೆ ಹಚ್ಚಿ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಪ್ರಸರಣವಾಗುವುದನ್ನು ತಡೆಯಲು ಈ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಪತ್ರದಲ್ಲಿ ಸೂಚಿಸಲಾಗಿದೆ.

‘ಈ ವರೆಗೂ ಮಂಕಿಪಾಕ್ಸ್‌ ಸೋಂಕು ಕಂಡುಬರದಿದ್ದ ದೇಶಗಳಲ್ಲಿಯೂ ಈಗ ಪ್ರಕರಣಗಳು ವರದಿಯಾಗುತ್ತಿವೆ. ದೇಶದಲ್ಲಿ ಈ ವರೆಗೆ ಈ ಸೋಂಕಿನ ಪ್ರಕರಣಗಳು ಕಂಡಬರದಿದ್ದರೂ, ಹೆಚ್ಚು ಮುಂಜಾಗ್ರತೆ ಅಗತ್ಯ’ ಎಂದು ವಿವರಿಸಲಾಗಿದೆ.

ಕ್ಯಾಮರೂನ್, ಕಾಂಗೊ, ಗ್ಯಾಬೊನ್, ನೈಜೀರಿಯಾ ಸೇರಿದಂತೆ ಕೇಂದ್ರ ಹಾಗೂ ಪಶ್ಚಿಮ ಆಫ್ರಿಕಾ ದೇಶಗಳಲ್ಲಿ ಮಂಕಿಪಾಕ್ಸ್‌ ಪ್ರಕರಣಗಳು ವರದಿಯಾಗಿವೆ. ಜೊತೆಗೆ, ಕೆಲ ಐರೋಪ್ಯ ದೇಶಗಳಲ್ಲಿಯೂ ಸೋಂಕಿನ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT