ನವದೆಹಲಿ: 11 ವರ್ಷಗಳ ಆಡಳಿತದಲ್ಲಿ ಮೋದಿ ಸರ್ಕಾರವು ಯಾವುದೇ ಹೊಣೆಗಾರಿಕೆಯನ್ನು ಪ್ರದರ್ಶಿಸಲಿಲ್ಲ. ಬರೀ ಅಪಪ್ರಚಾರದಲ್ಲೇ ಕಾಲ ಕಳೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ವಾಸ್ತವದ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿರುವ ಕೇಂದ್ರ ಸರ್ಕಾರವು, ಈಗ 2047ರ ಕನಸುಗಳನ್ನು ಮಾರಾಟ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿದ್ದ ಲೋಕಲ್ ಟ್ರೇನ್ನಿಂದ ಬಿದ್ದು, ನಾಲ್ವರು ಮೃತಪಟ್ಟು, 6 ಮಂದಿ ಗಾಯಗೊಂಡ ಘಟನೆ ಉಲ್ಲೇಖಿಸಿ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್ನಲ್ಲಿ ಹಿಂದಿ ಭಾಷೆಯಲ್ಲಿ ಪೋಸ್ಟ್ ಮಾಡಿರುವ ಅವರು, ದೇಶಕ್ಕೆ 11 ವರ್ಷಗಳು ಸೇವೆ ಮಾಡಿರುವುದಾಗಿ ಮೋದಿ ಸರ್ಕಾರ ಸಂಭ್ರಮಿಸುತ್ತಿದೆ. ದೇಶದ ವಾಸ್ತವವನ್ನು ಮುಂಬೈನಿಂದ ಬರುತ್ತಿರುವ ದುರಂತದ ಸುದ್ದಿಯು ಪ್ರತಿಬಿಂಬಿಸುತ್ತಿದೆ. ರೈಲಿನಿಂದ ಬಿದ್ದು ಹಲವು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಅವರು ಬರೆದುಕೊಂಡಿದ್ದಾರೆ.

ಭಾರತೀಯ ರೈಲ್ವೆ ಕೋಟ್ಯಂತರ ಜನರ ಜೀವನದ ಬೆನ್ನೆಲುಬಾಗಿತ್ತು. ಆದರೆ, ಇಂದು ಅದು ಅಭದ್ರತೆ, ಜನದಟ್ಟಣೆ ಮತ್ತು ಅವ್ಯವಸ್ಥೆಯ ಸಂಕೇತವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮೋದಿ ಸರ್ಕಾರದ 11 ವರ್ಷಗಳ ಆಡಳಿತದಲ್ಲಿ ಯಾವುದೇ ಹೊಣೆಗಾರಿಕೆ ಪ್ರದರ್ಶಿಸಿಲ್ಲ. ಬದಲಾವಣೆ ಇಲ್ಲ, ಕೇವಲ ಅಪಪ್ರಚಾರ ಮಾಡಿದೆ. ಸರ್ಕಾರ 2025ರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದು, ಈಗ 2047ರ ಕನಸುಗಳನ್ನು ಮಾರಾಟ ಮಾಡುತ್ತಿದೆ ಎಂದು ರಾಹುಲ್ ಕುಟುಕಿದ್ದಾರೆ.
.ಮೋದಿಯವರ 11 ವರ್ಷಗಳ ಆಡಳಿತ ರಾಜಕೀಯ ಸಂಸ್ಕೃತಿಯನ್ನೇ ಬದಲಿಸಿದೆ; ನಡ್ಡಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.