ನವದೆಹಲಿ: ಇದೇ ನವೆಂಬರ್ 23ರಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಅವಧಿ ಮುಕ್ತಾಯಗೊಳ್ಳುತ್ತಿದ್ದು, ಮುಂದಿನ ಸಿಜೆಐ ಆಯ್ಕೆ ಪ್ರಕ್ರಿಯೆಗೆ ಸರ್ಕಾರ ಗುರುವಾರದಿಂದ ಚಾಲನೆ ನೀಡಿದೆ.

ತಮ್ಮ ಉತ್ತರಾಧಿಕಾರಿ ಯಾರಾಗಬೇಕು ಎಂಬುದರ ಕುರಿತು ಹಾಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು ಜ್ಞಾಪನಾಪತ್ರ, ದಾಖಲಾತಿಗಳನ್ನು ಕಾನೂನು ಸಚಿವಾಲಯಕ್ಕೆ ಕಳುಹಿಸಬೇಕು.

ಸುಪ್ರೀಂ ಕೋರ್ಟ್ನಲ್ಲಿರುವ ಅತ್ಯಂತ ಹಿರಿಯ ನ್ಯಾಯಮೂರ್ತಿಯನ್ನು ಮುಂದಿನ ಸಿಜೆಐ ಆಗಿ ನೇಮಿಸಲು ಹಾಲಿ ಸಿಜೆಐ ಸಾಮಾನ್ಯವಾಗಿ ಶಿಫಾರಸು ಮಾಡುತ್ತಾರೆ. ತನ್ನ ಉತ್ತರಾಧಿಕಾರಿಯ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳು ಸೂಕ್ತ ಸಮಯದಲ್ಲಿ ಶಿಫಾರಸು ಕೋರಲಿದ್ದಾರೆ ಎಂದು ಕಾನೂನು ಸಚಿವಾಯವು ತಿಳಿಸಿದೆ. ಹಾಲಿ ಸಿಜೆಐ ನಿವೃತ್ತಿಯಾಗುವ ತಿಂಗಳು ಮುನ್ನ ಈ ಪತ್ರವನ್ನು ಕಳುಹಿಸುವ ಪದ್ಧತಿಯಿದೆ.

ಗವಾಯಿ ನಂತರ ಸೂರ್ಯಕಾಂತ್ ಅವರೇ ಸುಪ್ರೀಂ ಕೋರ್ಟ್ನ ಅತ್ಯಂತ ಹಿರಿಯ ನ್ಯಾಯಮೂರ್ತಿಗಳಾಗಿದ್ದು, ದೇಶದ ನ್ಯಾಯಾಂಗ ವ್ಯವಸ್ಥೆಯ ಅತ್ಯುನ್ನತ ಹುದ್ದೆ ಅಲಂಕರಿಸುವ ಸಾಲಿನಲ್ಲಿ ಮುಂಚೂಣಿಯಲ್ಲಿದ್ದಾರೆ.

ಸೂರ್ಯಕಾಂತ್ ಅವರು ನವೆಂಬರ್ 24ರಂದು ಮುಂದಿನ ಸಿಜೆಐ ಆಗಿ ನೇಮಕಗೊಂಡರೆ, ಮುಂದಿನ 15 ತಿಂಗಳು ಅಥವಾ 2027ರ ಫೆಬ್ರುವರಿ 9ರ ತನಕ ಈ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.