ನವದೆಹಲಿ: ಅಂಗನವಾಡಿಗಳ ಆಡಳಿತ ವ್ಯವಸ್ಥೆಯಲ್ಲಿರುವ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ತೊಡೆದುಹಾಕಲು ಐದು ಹಂತದ ಪರಿವೀಕ್ಷಣಾ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಲೋಕಸಭೆಯ ಅಧಿವೇಶನದಲ್ಲಿ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವಿರೇಂದ್ರಕುಮಾರ್, ಕೇಂದ್ರಗಳ ಕಾರ್ಯದಕ್ಷತೆ ಹೆಚ್ಚಳ ಮತ್ತು ಬಲವರ್ಧನೆಗಾಗಿ ಸರ್ಕಾರ ಈ ಕ್ರಮ ತೆಗೆದುಕೊಂಡಿದ್ದು, ರಾಷ್ಟ್ರ, ರಾಜ್ಯ, ಜಿಲ್ಲಾ, ಬ್ಲಾಕ್ ಹಾಗೂ ಅಂಗನವಾಡಿ ಹಂತದಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ತಿಳಿಸಿದರು.

‘ಸಮಗ್ರ ಶಿಶು ಅಭಿವೃದ್ಧಿ(ಐಸಿಡಿಎಸ್) ಯೋಜನೆ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಆಹಾರ ಪೂರೈಸಲಾಗುತ್ತಿದ್ದು, ಇದನ್ನು ದೆಹಲಿ, ಮುಂಬೈ, ಕೋಲ್ಕತ್ತ ಹಾಗೂ ಚೆನ್ನೈನಾಹಾರ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗುತ್ತಿದೆ’ ಎಂದು ತಿಳಿಸಿದರು.

‘ಅಂಗನವಾಡಿ ಕೇಂದ್ರಗಳ ಆಡಳಿತತ್ಮಾಕ ಜವಾಬ್ದಾರಿಯೂ ಸಂಪೂರ್ಣವಾಗಿ ರಾಜ್ಯ ಸರ್ಕಾರಕ್ಕೆ ಸೇರಿರುತ್ತದೆ. ದುರ್ವರ್ತನೆ ಹಾಗೂ ಭ್ರಷ್ಟಾಚಾರ ಪ್ರಕರಣಗಳು ಕಂಡುಬಂದರೆ ಸಂಬಂಧಪಟ್ಟ ಸರ್ಕಾರಗಳು ಕ್ರಮ ತೆಗೆದುಕೊಳ್ಳಲು ಸಂಪೂರ್ಣ ಅಧಿಕಾರ ಹೊಂದಿವೆ’ ಎಂದು ಸಚಿವರು ಇದೇ ವೇಳೆ ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.