ನವದೆಹಲಿ: ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಪ್ರದೇಶದ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತೊಮ್ಮೆ ಕರಡು ಅಧಿಸೂಚನೆ ಹೊರಡಿಸಿದೆ.

ಈ ಹಿಂದೆ ಐದು ಬಾರಿ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಕೇರಳದ ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ ಬಳಿಕ ಈ ಅಧಿಸೂಚನೆ ಪ್ರಕಟಿಸಲಾಗಿದೆ.

ಪಶ್ಚಿಮ ಘಟ್ಟಗಳಲ್ಲಿನ ಅಪರೂಪದ ಜೀವ ವೈವಿಧ್ಯ, ನದಿಗಳು, ನೈಸರ್ಗಿಕ ಸಂಪತ್ತು, ಅಪಾರ ಸಸ್ಯ ಮತ್ತು ಪ್ರಾಣಿ ಸಂಪತ್ತನ್ನು ಉಳಿಸುವ ಉದ್ದೇಶದಿಂದ 59,940 ಚ.ಕಿ.ಮೀ ವಿಸ್ತೀರ್ಣವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಸಂರಕ್ಷಿಸಬೇಕು ಎಂದು ಕೇಂದ್ರ ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ಸಮಿತಿಯು 2013ರಲ್ಲಿ ವರದಿ ಸಲ್ಲಿಸಿತ್ತು. ಈ ಸಮಿತಿಯ ಶಿಫಾರಸಿಗಿಂತ 3,114 ಚ.ಕಿ.ಮೀನಷ್ಟು ಕಡಿಮೆ ಭೂ ಪ್ರದೇಶವನ್ನು ಹೊಸ ಕರಡು ಅಧಿಸೂಚನೆಯಲ್ಲಿ ಗುರುತಿಸಲಾಗಿದೆ. ಆದರೆ, ಅದರ ಅಂತಿಮಗೊಳಿಸುವಿಕೆಯು ಪಶ್ಟಿಮ ಘಟ್ಟವನ್ನು ಹೊಂದಿರುವ ರಾಜ್ಯಗಳಾದ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ತಮಿಳುನಾಡು ಮತ್ತು ಕೇರಳದ ಒಪ್ಪಿಗೆಯನ್ನು ಅವಲಂಬಿಸಿರುತ್ತದೆ.

ಭೂಕುಸಿತ ಪೀಡಿತ ವಯನಾಡು ಜಿಲ್ಲೆಯ ಎರಡು ತಾಲ್ಲೂಕುಗಳ 13 ಗ್ರಾಮಗಳನ್ನು ಒಳಗೊಂಡಂತೆ ಕೇರಳದ 9,993.7 ಚದರ ಕಿ.ಮೀ ವಿಸ್ತೀರ್ಣದಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಹರಡಿದ್ದು, ಅದರಲ್ಲಿ 9,107 ಚ.ಕಿ.ಮೀ ಅರಣ್ಯ ಪ್ರದೇಶ ಮತ್ತು 886.7 ಚ.ಕಿ.ಮೀ ಅರಣ್ಯೇತರ ಪ್ರದೇಶವಾಗಿದೆ.

ಅಧಿಸೂಚನೆಯ ಪ್ರಕಾರ, 2022ರ ಜುಲೈ ಮತ್ತು 2024 ರ ಮಾರ್ಚ್ ನಡುವೆ ರಾಜ್ಯಗಳೊಂದಿಗೆ ಒಂಬತ್ತು ಸಭೆಗಳನ್ನು ನಡೆಸಲಾಗಿದೆ. ರಾಜ್ಯಗಳ ಸಲಹೆಗಳನ್ನು ಸ್ವೀಕರಿಸಲಾಗಿದೆ. ಐದನೇ ಕರಡು ಅಧಿಸೂಚನೆಯನ್ನು 2022ರಲ್ಲಿ ಪ್ರಕಟಿಸಲಾಗಿತ್ತು.

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕೆಲ ಬಗೆಯ ಚಟುವಟಿಕೆಗಳು ಮತ್ತು ಯೋಜನೆಗಳನ್ನು ಈ ಕರಡಿನಲ್ಲಿ ನಿಷೇಧಿಸಲಾಗಿದೆ. ಅವುಗಳೆಂದರೆ:

ಗಣಿಗಾರಿಕೆ, ಕಲ್ಲುಗಣಿಗಾರಿಕೆ ಮತ್ತು ಮರಳು ಗಣಿಗಾರಿಕೆಯನ್ನು ಪೂರ್ಣ ನಿಷೇಧಿಸಲಾಗಿದೆ. ಹಾಲಿ ನಡೆಯುತ್ತಿರುವ ಗಣಿಗಾರಿಕೆಗಳನ್ನು ಅಂತಿಮ ಅಧಿಸೂಚನೆ ಹೊರಬಿದ್ದ ದಿನದಿಂದ ಐದು ವರ್ಷಗಳಲ್ಲಿ ಹಂತ ಹಂತವಾಗಿ ತೆರವುಗೊಳಿಸಲಾಗುತ್ತದೆ.

ಯಾವುದೇ ಹೊಸ ಉಷ್ಣ ವಿದ್ಯುತ್ ಯೋಜನೆಗಳನ್ನು ಕೈಗೆತ್ತಿಕೊಳ್ಳುವಂತಿಲ್ಲ. ಅಸ್ತಿತ್ವದಲ್ಲಿರುವ ಸ್ಥಾವರಗಳ ವಿಸ್ತರಣೆಗೂ ಅವಕಾಶವಿಲ್ಲ.

ಕೇಂದ್ರ ಅಥವಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು ‘ಕೆಂಪು’ ಪಟ್ಟಿಯಲ್ಲಿ ನಿರ್ದಿಷ್ಟಪಡಿಸಿರುವ ಕೈಗಾರಿಕೆಗಳ ಸ್ಥಾಪನೆ ಮತ್ತು ಅಸ್ತಿತ್ವದಲ್ಲಿರುವ ಕೈಗಾರಿಕೆಗಳ ವಿಸ್ತರಣೆಯನ್ನು ನಿಷೇಧಿಸಲಾಗಿದೆ. ಆರೋಗ್ಯ ರಕ್ಷಣಾ ಸಂಸ್ಥೆಗಳೂ ಸೇರಿದಂತೆ ಅಸ್ತಿತ್ವದಲ್ಲಿರುವ ‘ಕೆಂಪು’ ಪಟ್ಟಿಯ ಎಲ್ಲ ಕೈಗಾರಿಕೆಗಳ ಮುಂದುವರಿಕೆಗೆ ಅವಕಾಶ ಕಲ್ಪಿಸಲಾಗಿದೆ.

20,000 ಚ.ಮೀ ವಿಸ್ತೀರ್ಣಕ್ಕೂ ಹೆಚ್ಚಿನ ಕಟ್ಟಡ, ನಿರ್ಮಾಣಕ್ಕೆ ಸಂಬಂಧಿಸಿದ ಹೊಸ ಯೋಜನೆಗಳು, 50 ಹೆಕ್ಟೇರ್ ಅಥವಾ 1,50,000 ಚ.ಮೀಟರ್‌ಗಿಂತ ಹೆಚ್ಚಿನ ವಿಸ್ತೀರ್ಣದ ಟೌನ್‌ಶಿಪ್ ಮತ್ತು ಪ್ರದೇಶಾಭಿವೃದ್ಧಿ ಯೋಜನೆಗಳನ್ನು ನಿಷೇಧಿಸಲಾಗಿದೆ. ಆದರೆ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಈಗಾಗಲೇ ಇರುವ ವಸತಿಗಳ ದುರಸ್ತಿ, ವಿಸ್ತರಣೆ, ನವೀಕರಣಕ್ಕೆ ನಿರ್ಬಂಧವಿಲ್ಲ.

ಗಾಡ್ಗೀಳ್, ಕಸ್ತೂರಿ ರಂಗನ್ ಸಮಿತಿ

ಪಶ್ಚಿಮ ಘಟ್ಟದ ಅಪೂರ್ವ ಜೀವ ವೈವಿಧ್ಯದ ಸಂರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಹಿರಿಯ ವಿಜ್ಞಾನಿ ಮಾಧವ ಗಾಡ್ಗೀಳ್ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಈ ಹಿಂದೆ ಸಮಿತಿ ರಚಿಸಿತ್ತು. ಈ ಸಮಿತಿಯು 2011ರಲ್ಲಿ ಘಟ್ಟದ 1,29,037 ಚದರ ಕಿ.ಮೀ ವ್ಯಾಪ್ತಿಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಬಹುದೆಂದು ಶಿಫಾರಸು ಮಾಡಿತ್ತು. ಘಟ್ಟದ ಶೇ 64ರಷ್ಟು ಪ್ರದೇಶದಲ್ಲಿ ಅಭಿವೃದ್ಧಿಗೆ ಕೆಲ ನಿರ್ಬಂಧ ಹಾಕಬೇಕು ಎಂದು ಶಿಫಾರಸು ಮಾಡಿತ್ತು.

ಇದಕ್ಕೆ ರಾಜಕೀಯ ವಲಯದಲ್ಲಿ ಭಾರಿ ವಿರೋಧ ಎದುರಾದಾಗ ಕೇಂದ್ರ ಸರ್ಕಾರ ಗಾಡ್ಗೀಳ್ ವರದಿ ಪರಿಶೀಲನೆಗೆ 2013ರ ಏಪ್ರಿಲ್ 15ರಂದು
ಡಾ.ಕೆ.ಕಸ್ತೂರಿ ರಂಗನ್ ಸಮಿತಿ ರಚಿಸಿತ್ತು. ಈ ಸಮಿತಿ ಅದೇ ವರ್ಷದ ನವೆಂಬರ್ 13ರಂದು ವರದಿ ನೀಡಿ, ಘಟ್ಟದ ಶೇ 37ರಷ್ಟು ಅರಣ್ಯ ಪ್ರದೇಶವನ್ನು ಅಂದರೆ 59,940 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.