ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

CAA: ಭಾರತದ ಪೌರತ್ವ ಕೋರುವ ಅರ್ಜಿಗೆ ಪ್ರತ್ಯೇಕ ವೆಬ್ ಪೋರ್ಟಲ್‌ ಆರಂಭ

Published 12 ಮಾರ್ಚ್ 2024, 7:38 IST
Last Updated 12 ಮಾರ್ಚ್ 2024, 7:38 IST
ಅಕ್ಷರ ಗಾತ್ರ

ನವದೆಹಲಿ: 'ಪೌರತ್ವ ತಿದ್ದುಪಡಿ ಕಾಯ್ದೆ' ಜಾರಿಗೆ ಬಂದಿದೆ ಎಂಬ ಘೋಷಣೆಯ ಬೆನ್ನಲ್ಲೇ ಭಾರತದ ಪೌರತ್ವ ಪಡೆಯುವ ಅರ್ಹತೆಯನ್ನು ಹೊಂದಿರುವ ಜನರಿಗಾಗಿ ಕೇಂದ್ರ ಗೃಹ ಸಚಿವಾಲಯವು ಪ್ರತ್ಯೇಕ ವೆಬ್ ಪೋರ್ಟಲ್‌ ಆರಂಭಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ 2019ಕ್ಕೆ (ಸಿಎಎ) ಸಂಬಂಧಿಸಿದ ನಿಯಮಗಳನ್ನು ಕೇಂದ್ರವು ಸೋಮವಾರ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಇದರ ಬೆನ್ನಲ್ಲೇ ವೆಬ್ ಪೋರ್ಟಲ್ ಆರಂಭಿಸಲಾಗಿದೆ.

ಪೌರತ್ವ ಕೋರುವ ಅರ್ಜಿಗಳನ್ನು ಸಂಪೂರ್ಣವಾಗಿ ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕಿದೆ.

ವೆಬ್ ಪೋರ್ಟಲ್ ಲಿಂಕ್: indiancitizenshiponline.nic.in

ಶೀಘ್ರದಲ್ಲೇ ಮೊಬೈಲ್ ಆ್ಯಪ್:

ಶೀಘ್ರದಲ್ಲೇ 'CAA-2019' ಮೊಬೈಲ್ ಆ್ಯಪ್ ಅನ್ನು ಕೂಡ ಬಿಡುಗಡೆ ಮಾಡುವುದಾಗಿ ತಿಳಿಸಲಾಗಿದೆ.

ಈ ಕಾಯ್ದೆಯು ಯಾವುದೇ ದಾಖಲೆಗಳು ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಮೊದಲು ಭಾರತ ಪ್ರವೇಶಿಸಿದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ನೀಡುತ್ತದೆ. ಈ ಮೂರು ದೇಶಗಳಲ್ಲಿ ದೌರ್ಜನ್ಯಕ್ಕೆ ಗುರಿಯಾಗಿ ಭಾರತಕ್ಕೆ ಬಂದ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತ ಸಮುದಾಯದವರಿಗೆ ಭಾರತದ ಪೌರತ್ವವನ್ನು ನೀಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT