ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರ್ಭಕಂಠ ಕ್ಯಾನ್ಸರ್‌ ಲಸಿಕೆ ಖರೀದಿ: ಜಾಗತಿಕ ಟೆಂಡರ್ ಸಾಧ್ಯತೆ

ಎಸ್‌ಐಐ, ಮೆರ್ಕ್‌ ಪಾಲ್ಗೊಳ್ಳುವ ಸಾಧ್ಯತೆ
Last Updated 29 ಜನವರಿ 2023, 12:44 IST
ಅಕ್ಷರ ಗಾತ್ರ

ನವದೆಹಲಿ: ಗರ್ಭಕಂಠ ಕ್ಯಾನ್ಸರ್‌ ತಡೆಗಟ್ಟಲು ನೀಡಲಾಗುವ ಲಸಿಕೆಯ (ಎಚ್‌ಪಿವಿ ಲಸಿಕೆ) ಖರೀದಿಗೆ ಮುಂದಾಗಿರುವ ಕೇಂದ್ರ ಸರ್ಕಾರ, ಈ ಸಂಬಂಧ ಏಪ್ರಿಲ್‌ನಲ್ಲಿ ಜಾಗತಿಕ ಟೆಂಡರ್‌ ಆಹ್ವಾನಿಸಲು ನಿರ್ಧರಿಸಿದೆ.

‘2026ರ ವೇಳೆಗೆ, ಲಸಿಕೆಯ 16.02 ಕೋಟಿಯಷ್ಟು ಡೋಸ್‌ಗಳು ಲಭ್ಯವಾಗಬೇಕು. ಹೀಗಾಗಿ, ಜಾಗತಿಕ ಟೆಂಡರ್‌ ಕರೆಯಲಾಗುತ್ತಿದೆ. ಪುಣೆಯ ಸೀರಂ ಇನ್ಸ್‌ಟಿಟ್ಯೂಟ್‌ ಆಫ್ ಇಂಡಿಯಾ (ಎಸ್‌ಐಐ) ಅಲ್ಲದೇ, ಈ ಟೆಂಡರ್‌ ಪ್ರಕ್ರಿಯೆಯಲ್ಲಿ ಮೆರ್ಕ್‌ ಕಂಪನಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಮೂಲಗಳು ಹೇಳಿವೆ.

9ರಿಂದ 14 ವರ್ಷ ವಯೋಮಾನದ ಬಾಲಕಿಯರಿಗೆ ಈ ಲಸಿಕೆ ನೀಡಲಾಗುತ್ತದೆ. ಅಲ್ಲದೇ, ಈ ಲಸಿಕೆಯನ್ನು ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಲ್ಲಿ ಸೇರಿಸಲಾಗಿದ್ದು, ಬರುವ ಜೂನ್‌ನಲ್ಲಿ ಲಸಿಕೆ ನೀಡಿಕೆಗೆ ಚಾಲನೆ ನೀಡಲಾಗುತ್ತದೆ.

ಎಸ್‌ಐಐ ಉತ್ಪಾದಿಸುವ ಎಚ್‌ಪಿವಿ ಲಸಿಕೆ ‘ಸರ್ವಾವ್ಯಾಕ್‌’ ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಜ.24ರಂದು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದರು. ಎಸ್‌ಐಐ ಸಿಇಒ ಅದಾರ್‌ ಪೂನಾವಾಲಾ ಹಾಗೂ ನಿರ್ದೇಶಕ (ಸರ್ಕಾರ ಮತ್ತು ನಿಯಂತ್ರಣ ಪ್ರಾಧಿಕಾರದ ವ್ಯವಹಾರಗಳ ವಿಭಾಗ) ಪ್ರಕಾಶ್ ಸಿಂಗ್‌ ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT