ನವದೆಹಲಿ: ತನ್ನ ಪ್ರಮುಖ ಕಾರ್ಯಸೂಚಿಯಾದ ‘ಒಂದು ದೇಶ–ಒಂದು ಚುನಾವಣೆ’ ಅನುಷ್ಠಾನಕ್ಕೆ ದಾರಿ ಮಾಡಿಕೊಡುವ ಮೂರು ಮಸೂದೆಗಳ ಮಂಡನೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದೆ.
ಈ ಯೋಜನೆ ಅನುಷ್ಠಾನಕ್ಕಾಗಿ ಸಂವಿಧಾನದ ತಿದ್ದುಪಡಿಗೆ ಸಂಬಂಧಿಸಿದ ಎರಡು ಮಸೂದೆಗಳು ಸೇರಿ ಒಟ್ಟು ಮೂರು ಮಸೂದೆಗಳನ್ನು ಮಂಡಿಸಲು ನಿರ್ಧರಿಸಿದೆ.
ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಉನ್ನತ ಸಮಿತಿ ಏಕಕಾಲಕ್ಕೆ ಚುನಾವಣೆ ನಡೆಸುವುದಕ್ಕೆ ಸಂಬಂಧಿಸಿ ಸಲ್ಲಿಸಿದ್ದ ಶಿಫಾರಸುಗಳಿಗೆ ಇತ್ತೀಚೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು. ಈಗ, ಶಿಫಾರಸುಗಳ ಜಾರಿಗೆ ಮುಂದಡಿ ಇಟ್ಟಿದೆ.
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳೊಂದಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದು ಉದ್ದೇಶಿತ ಮಸೂದೆಗಳಲ್ಲೊಂದು. ಈ ಮಸೂದೆ ಅಂಗೀಕಾರಕ್ಕೆ ಕನಿಷ್ಠ ಶೇ 50ರಷ್ಟು ರಾಜ್ಯಗಳ ಒಪ್ಪಿಗೆ ಅಗತ್ಯ.
ಉದ್ದೇಶಿತ ತಿದ್ದುಪಡಿಗಳು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.