ನವದೆಹಲಿ:'ಎನ್‌ಇಇಟಿ–ಜೆಇಇ ಪ್ರವೇಶ ಪರೀಕ್ಷೆ ವಿಷಯದಲ್ಲಿ ಕೇಂದ್ರ ಸರ್ಕಾರ ಮೊದಲು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಬೇಕು. ನಂತರ ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ದೇಶದಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಈ ಪ್ರವೇಶ ಪರೀಕ್ಷೆಗಳನ್ನು ಮುಂದೂಡಬೇಕೆಂದು ಒತ್ತಾಯಿಸುತ್ತಿರುವ ಸಂದರ್ಭದಲ್ಲಿ ರಾಹುಲ್‌ಗಾಂಧಿ ವಿದ್ಯಾರ್ಥಿಗಳ ಪರವಾಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳ ಒತ್ತಾಯವನ್ನು ಬೆಂಬಲಿಸಿ ಟ್ವೀಟ್ ಮಾಡಿರುವ ರಾಹುಲ್‌ಗಾಂಧಿ, ’ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆರೋಗ್ಯದ ಜತೆಗೆ ಭವಿಷ್ಯದ ಬಗ್ಗೆಯೂ ಕಾಳಜಿ ಇದೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪ್ರಯಾಣ ಮಾಡುವುದು, ಹೋಟೆಲ್‌ಗಳಲ್ಲಿ ಆಹಾರ ಸೇವನೆ, ವಸತಿ ಗೃಹಗಳಲ್ಲಿ ವಾಸ್ತವ್ಯ ಹೂಡುವುದರ ಬಗ್ಗೆ ಭಯಭೀತರಾಗಿದ್ದಾರೆ. ಅಸ್ಸಾಂ ಮತ್ತು ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ’ ಎಂದ ಟ್ವೀಟ್‌ನಲ್ಲಿ ವಿವರಿಸಿದ್ದಾರೆ.

’ಸರ್ಕಾರ ಮೊದಲು ಪರೀಕ್ಷೆಗೆ ಸಂಬಂಧಿಸಿದವರೆಲ್ಲರ ಕಷ್ಟಗಳು, ಕುಂದು–ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಹುಡುಕಬೇಕು’ ಎಂದು ಅವರು ಒತ್ತಾಯಿಸಿದ್ದಾರೆ. #anti-students# ’ವಿದ್ಯಾರ್ಥಿ ವಿರೋಧಿ ಮೋದಿ ಸರ್ಕಾರ’ ಎಂಬ ಹ್ಯಾಷ್‌ಟ್ಯಾಗ್ ಮೂಲಕ ರಾಹುಲ್ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.