ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12 ವರ್ಷದವರ ಲಸಿಕಾ ಅಭಿಯಾನ: ‘ಕೊವೊವ್ಯಾಕ್ಸ್‌’ ಸೇರ್ಪಡೆಗೊಳಿಸಲು ಶಿಫಾರಸು

Last Updated 3 ಏಪ್ರಿಲ್ 2022, 14:45 IST
ಅಕ್ಷರ ಗಾತ್ರ

ನವದೆಹಲಿ: 12 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗಾಗಿ ಹಮ್ಮಿಕೊಂಡಿರುವ ರಾಷ್ಟ್ರೀಯ ಲಸಿಕಾ ಅಭಿಯಾನದಲ್ಲಿ ಸೀರಂ ಸಂಸ್ಥೆಯ ಕೊವೊವ್ಯಾಕ್ಸ್‌ ಲಸಿಕೆಯನ್ನು ಸೇರ್ಪಡೆಗೊಳಿಸಲು ಕೋವಿಡ್‌–19 ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ (ಎನ್‌ಟಿಎಜಿಐ) ಶಿಫಾರಸು ಮಾಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

ಕೊವೊವ್ಯಾಕ್ಸ್‌ ಲಸಿಕೆಯನ್ನು ತುರ್ತು ಸಂದರ್ಭಗಳಲ್ಲಿ ವಯಸ್ಕರಿಗೆ ನೀಡಲು ಕಳೆದ ಡಿಸೆಂಬರ್‌ 28 ರಂದು ಹಾಗೂ 12ರಿಂದ 17 ವಯಸ್ಸಿನವರಿಗೆ ನೀಡಲು ಮಾರ್ಚ್‌ 9ರಂದು ಭಾರತೀಯ ಔಷಧ ನಿಯಂತ್ರಕರು ಷರತ್ತುಬದ್ಧ ಅನುಮೋದನೆ ನೀಡಿದ್ದರು.

ಕೊವೊವ್ಯಾಕ್ಸ್‌ ಲಸಿಕೆಯನ್ನು ರಾಷ್ಟ್ರೀಯ ಲಸಿಕಾ ಅಭಿಯಾನದಲ್ಲಿ ಸೇರ್ಪಡೆಗೊಳಿಸಬೇಕೆಂದು ಕೋರಿ ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾದ ಸರ್ಕಾರ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್‌ ಕುಮಾರ್‌ ಸಿಂಗ್‌ ಅವರು ಈಚೆಗೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT