ನವದೆಹಲಿ: ದೇಶದಲ್ಲಿ ಕೆಲವೆಡೆ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಎಂಎಸ್‌ಎಂಇ, ಆಹಾರ ಸಂಸ್ಕರಣಾ ಘಟಕಗಳಂತಹ ಕೈಗಾರಿಕೆಗಳಿಗೆ ಮತ್ತು ಮೂಲಸೌಕರ್ಯ ನಿರ್ಮಾಣ ಯೋಜನೆಗಳಿಗೆ ತಾತ್ಕಾಲಿಕವಾಗಿ ದ್ರವೀಕೃತ ಆಮ್ಲಜನಕ ಪೂರೈಸಲು ಕೇಂದ್ರ ಸರ್ಕಾರ ಆಮ್ಲಜನಕ ಉತ್ಪಾದಕ ಘಟಕಗಳಿಗೆ ಅನುಮತಿ ನೀಡಿದೆ.

ಆದರೆ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿರುವ ಆಸ್ಪತ್ರೆಗಳು ಮತ್ತು ಇತರೆ ವೈದ್ಯಕೀಯ ಉದ್ದೇಶಗಳಿಗೆ ಇರುವ ವೈದ್ಯಕೀಯ ಆಮ್ಲಜನಕದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಅಲ್ಲಿನ ಬೇಡಿಕೆಗಳನ್ನು ಪೂರೈಸಿದ ನಂತರವೇ ಉಳಿದ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸಬೇಕು ಎಂದು ಸರ್ಕಾರ ತಿಳಿಸಿದೆ.

ಕೋವಿಡ್ ಪ್ರಕರಣಗಳು ಏರಿಕೆಯಾದ ಕಾರಣ, ಕೇಂದ್ರ ಸರ್ಕಾರ ಏಪ್ರಿಲ್ ತಿಂಗಳಲ್ಲಿ ಒಂಬತ್ತು ನಿರ್ದಿಷ್ಟ ಕೈಗಾರಿಕೆಗಳನ್ನು ಹೊರತುಪಡಿಸಿ, ಬೇರೆ ಕೈಗಾರಿಕಾ ಉದ್ದೇಶಗಳಿಗಾಗಿ ಆಮ್ಲಜನಕ ಪೂರೈಸುವುದಕ್ಕೆ ನಿಷೇಧ ಹೇರಿತ್ತು.

ರಾಜಸ್ಥಾನದಲ್ಲಿ 11.5 ಲಕ್ಷ ಡೋಸ್ ಕೋವಿಡ್ ಲಸಿಕೆ ವ್ಯರ್ಥ: ಗಜೇಂದ್ರ ಸಿಂಗ್ ಆರೋಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.