ಮುಂಬೈ: ಬದ್ಲಾಪುರ ಶಾಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಅಕ್ಷಯ್ ಶಿಂದೆಯನ್ನು ಶೂಟೌಟ್‌ನಲ್ಲಿ ಹತ್ಯೆ ಮಾಡಿದ ಪ್ರಕರಣದ ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ಆಯೋಗ ರಚಿಸಿದೆ.
ಅಲಹಾಬಾದ್ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ದಿಲೀಪ್ ಭೋಸಲೆ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗ ರಚಿಸಲಾಗಿದೆ ಎಂದು ಗೃಹ ಸಚಿವಾಲಯವು ಮಂಗಳವಾರ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಮಿತಿಯು ಮೂರು ತಿಂಗಳಲ್ಲಿ ವರದಿ ಸಲ್ಲಿಸಲಿದೆ ಎಂದು ಹೇಳಿದೆ.
ಆಗಸ್ಟ್‌ನಲ್ಲಿ ಠಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ ನಾಲ್ಕು ಹಾಗೂ ಐದು ವರ್ಷದ ಹೆಣ್ಣುಮಕ್ಕಳಿಬ್ಬರ ಮೇಲೆ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಸ್ಥಳೀಯರು ಈ ದುಷ್ಕೃತ್ಯ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಅಕ್ಷಯ್ ಶಿಂದೆಯನ್ನು ಬಂಧಿಸಿದ್ದರು. ಸೆ.23ರಂದು ಶೂಟೌಟ್‌ನಲ್ಲಿ ಹತ್ಯೆ ಮಾಡಲಾಗಿತ್ತು.
ಪೊಲೀಸರು ನಡೆಸಿದ ಶೂಟೌಟ್ ಬಗ್ಗೆ ಬಾಂಬೆ ಹೈಕೋರ್ಟ್ ಕಳೆದ ವಾರ ಕಳವಳ ವ್ಯಕ್ತಪಡಿಸಿತ್ತು.