ನವದೆಹಲಿ: ಪ್ರಸಕ್ತ ವರ್ಷದ ಸೆಪ್ಟೆಂಬರ್‌ನಿಂದ ಡಿಸೆಂಬರ್ ನಡುವೆ 21ನೇ ರಾಷ್ಟ್ರೀಯ ಜಾನುವಾರು ಗಣತಿ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ಪಶುಪಾಲನಾ ಮತ್ತು ಹೈನುಗಾರಿಕೆ ಸಚಿವಾಲಯವು ಈ ಗಣತಿ ನಡೆಸಲಿದೆ. ಮೊಬೈಲ್ ಬಳಸಿಕೊಂಡು ದತ್ತಾಂಶ ಸಂಗ್ರಹಿಸಲಾಗುತ್ತದೆ. ಇದರಿಂದ ಆನ್‌ಲೈನ್‌ಗೆ ದತ್ತಾಂಶವನ್ನು ಸುಲಭವಾಗಿ ರವಾನಿಸಲು ಅನುಕೂಲವಾಗಲಿದೆ ಎಂದು ತಿಳಿಸಿದೆ.

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಗಣತಿ ನಡೆಯಲಿದೆ. ಹಸು, ಎಮ್ಮೆ, ಕುರಿ, ಮೇಕೆ, ಹಂದಿ, ಕುದುರೆ, ಹೇಸರಗತ್ತೆ, ಕತ್ತೆ, ಒಂಟೆ, ನಾಯಿ, ಮೊಲ, ಸಾಕಾನೆಗಳ ಎಣಿಕೆ ನಡೆಯಲಿದೆ. ಕೋಳಿ, ಬಾತುಕೋಳಿ ಸೇರಿದಂತೆ ಕುಕ್ಕುಟ ವಿಭಾಗದಲ್ಲಿರುವ ಪಕ್ಷಿಗಳ ಎಣಿಕೆ ನಡೆಯಲಿದೆ. ಜಾನುವಾರು ಮತ್ತು ಪಕ್ಷಿಗಳ ತಳಿ, ಲಿಂಗ ಮತ್ತು ವಯಸ್ಸನ್ನು ದಾಖಲಿಸಲಾಗುತ್ತದೆ.

ಸಚಿವಾಲಯದ ಕಾರ್ಯದರ್ಶಿ ಅಲ್ಕಾ ಉಪಾಧ್ಯಾಯ ಅವರ ಅಧ್ಯಕ್ಷತೆಯಲ್ಲಿ ಗಣತಿಯ ಸಿದ್ಧತೆ ಕುರಿತು ಗುರುವಾರ ಸಭೆ ನಡೆಯಿತು. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಹಿರಿಯ ಅಧಿಕಾರಿಗಳು ಮತ್ತು ತಾಂತ್ರಿಕ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.