ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐ.ಟಿ. ನಿಯಮ ಉಲ್ಲಂಘನೆ: ದೂರು ನೀಡಲು ಸರ್ಕಾರದಿಂದ ನೆರವು– ರಾಜೀವ್ ಚಂದ್ರಶೇಖರ್

Published 24 ನವೆಂಬರ್ 2023, 14:44 IST
Last Updated 24 ನವೆಂಬರ್ 2023, 14:44 IST
ಅಕ್ಷರ ಗಾತ್ರ

ನವದೆಹಲಿ: ಡೀಪ್‌ಫೇಕ್‌ನಂತಹ ಆಕ್ಷೇ‍‍ಪಾರ್ಹ ವಸ್ತು–ವಿಷಯಗಳು ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದಲ್ಲಿ, ಐ.ಟಿ. ನಿಯಮಗಳನ್ನು ಉಲ್ಲಂಘಿಸಿದ ಸಾಮಾಜಿಕ ಜಾಲತಾಣಗಳ ವಿರುದ್ಧ ದೂರು ಸಲ್ಲಿಸಲು ಕೇಂದ್ರ ಸರ್ಕಾರವು ಜನರಿಗೆ ನೆರವು ಒದಗಿಸಲಿದೆ.

ಸಾಮಾಜಿಕ ಜಾಲತಾಣ ವೇದಿಕೆಗಳು ಐ.ಟಿ. ನಿಯಮಗಳನ್ನು ಉಲ್ಲಂಘಿಸಿರುವ ಬಗ್ಗೆ ಮಾಹಿತಿ ನೀಡಲು ನೆರವಾಗುವ ವೇದಿಕೆಯೊಂದನ್ನು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಅಭಿವೃದ್ಧಿಪಡಿಸಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐ.ಟಿ. ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ವೇದಿಕೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ನಂತರ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ‘ಐ.ಟಿ. ನಿಯಮಗಳ ಉಲ್ಲಂಘನೆಯನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ’ ಎಂದರು.

ಎಫ್‌ಐಆರ್‌ ಅನ್ನು ವೇದಿಕೆಗಳ ವಿರುದ್ಧ ದಾಖಲಿಸಲಾಗುತ್ತದೆ. ವೇದಿಕೆಗಳು ಆಕ್ಷೇಪಾರ್ಹ ವಸ್ತು–ವಿಷಯ ಬಂದಿದ್ದು ಎಲ್ಲಿಂದ ಎಂಬುದನ್ನು ತಿಳಿಸಿದರೆ, ಆ ವಸ್ತು–ವಿಷಯವನ್ನು ಪೋಸ್ಟ್ ಮಾಡಿದ ಸಂಸ್ಥೆ–ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತದೆ ಎಂದು ಸಚಿವರು ಹೇಳಿದರು.

ಸಾಮಾಜಿಕ ಜಾಲತಾಣ ವೇದಿಕೆಗಳು ತಮ್ಮ ಬಳಕೆ ನಿಯಮಗಳನ್ನು ಐ.ಟಿ. ನಿಯಮಗಳಿಗೆ ಅನುಗುಣವಾಗಿ ಬದಲಾಯಿಸಿಕೊಳ್ಳಲು ಏಳು ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT