ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೃಷಿಯ ಬಗ್ಗೆ ವೈಜ್ಞಾನಿಕ ಅರಿವು ಮೂಡಿಸಲು ‘ಕಿಸಾನ್‌ ಕಿ ಬಾತ್‌’ ಕಾರ್ಯಕ್ರಮ

Published : 15 ಆಗಸ್ಟ್ 2024, 15:59 IST
Last Updated : 15 ಆಗಸ್ಟ್ 2024, 15:59 IST
ಫಾಲೋ ಮಾಡಿ
Comments

ನವದೆಹಲಿ: ರೈತರಿಗೆ ಕೃಷಿಯ ಬಗ್ಗೆ ವೈಜ್ಞಾನಿಕ ಅರಿವು ಮೂಡಿಸಲು ಸರ್ಕಾರವು ಮಾಸಿಕ ‘ಕಿಸಾನ್‌ ಕಿ ಬಾತ್‌’ ರೇಡಿಯೊ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ಆಧುನಿಕ ಕೃಷಿ ಪದ್ಧತಿ ಬಗ್ಗೆ ಅರಿವು ಮೂಡಿಸುವುದು ಇದರ ಉದ್ದೇಶವಾಗಿದೆ. ವೈಜ್ಞಾನಿಕ ಮಾಹಿತಿ ಮೂಲಕ ರೈತರನ್ನು ಆರ್ಥಿಕವಾಗಿ ಸಬಲಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಕೃಷಿ ವಿಜ್ಞಾನಿಗಳು, ಕೃಷಿ ಇಲಾಖೆಯ ಅಧಿಕಾರಿಗಳು, ಸಚಿವರು ಕೃಷಿ ಪದ್ಧತಿಯಲ್ಲಿ ಅನುಸರಿಸಬೇಕಿರುವ ವಿಧಾನಗಳು ಮತ್ತು ವೈಜ್ಞಾನಿಕ ಪ್ರಗತಿ ಕುರಿತು ರೈತರಿಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ದೇಶದ ಕೃಷಿ ವಲಯದ ಪುನಶ್ಚೇತನಕ್ಕೆ ಒತ್ತು ನೀಡುವುದು ಈ ರೇಡಿಯೊ ಕಾರ್ಯಕ್ರಮ ಉದ್ದೇಶವಾಗಿದೆ. ರೈತರು ಮತ್ತು ಕೃಷಿ ವಿಜ್ಞಾನ ಕೇಂದ್ರಗಳನ್ನು ಒಂದೇ ವೇದಿಕೆಯಡಿ ತರುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT