ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಮಾಜವಾಗಿ ನಾವು ಎತ್ತ ಸಾಗುತ್ತಿದ್ದೇವೆ: ಬದ್ಲಾಪುರ ಘಟನೆ ಬಗ್ಗೆ ರಾಹುಲ್ ಗಾಂಧಿ

Published : 21 ಆಗಸ್ಟ್ 2024, 16:45 IST
Last Updated : 21 ಆಗಸ್ಟ್ 2024, 16:45 IST
ಫಾಲೋ ಮಾಡಿ
Comments

ನವದೆಹಲಿ: ಮಹಿಳೆಯರಿಗೆ ಸುರಕ್ಷಿತ ಕೆಲಸದ ವಾತಾವರಣ ಸೃಷ್ಟಿಸುವತ್ತ ಸರ್ಕಾರ ಮತ್ತು ಪಕ್ಷಗಳು ಚಿಂತಿಸಬೇಕಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಮಹಾರಾಷ್ಟ್ರದ ಬದ್ಲಾಪುರದಲ್ಲಿ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ‘ಈ ಪ್ರಕರಣವು ಒಂದು ಸಮಾಜವಾಗಿ ನಾವು ಎತ್ತ ಸಾಗುತ್ತಿದ್ದೇವೆ’ಎಂಬುದನ್ನು ಯೋಚಿಸುವಂತೆ ಮಾಡಿದೆ ಎಂದಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಇಂದೂ ಠಾಣೆ ಜಿಲ್ಲೆಯ ಬದ್ಲಾಪುರದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಪ್ರತಿಭಟನೆ ನಡೆಸಿದರು. ರೈಲ್ವೆ ಸಂಚಾರಕ್ಕೆ ತಡೆಯೊಡ್ಡಿ, ಲೈಂಗಿಕ ದೌರ್ಜನ್ಯ ನಡೆದಿದ್ದ ನರ್ಸರಿಯನ್ನು ಧ್ವಂಸಗೊಳಿಸಿದ್ದಾರೆ.

ಹಿಂದಿ ಭಾಷೆಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ‘ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಬಿಹಾರದ ಬಳಿಕ ಮಹಾರಾಷ್ಟ್ರದಲ್ಲಿ ನಮ್ಮ ಹೆಣ್ಣುಮಕ್ಕಳ ಮೇಲೆ ನಾಚಿಕೆಗೇಡಿನ ಅಪರಾಧಗಳು ನಡೆದಿರುವುದು ಒಂದು ಸಮಾಜವಾಗಿ ನಾವು ಎತ್ತ ಸಾಗುತ್ತಿದ್ದೇವೆ? ಎಂದು ಯೋಚಿಸುವಂತೆ ಮಾಡಿದೆ. ಬದ್ಲಾಪುರದಲ್ಲಿ ಇಬ್ಬರು ಮುಗ್ಧ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಬೆಳಕಿಗೆ ಬಂದ ಬಳಿಕ ಅವರಿಗೆ ನ್ಯಾಯ ಒದಗಿಸುವ ಕೆಲಸವನ್ನು ಮೊದಲು ಮಾಡಬೇಕಿತ್ತು. ಜನರು ಬೀದಿಗಿಳಿದು ಹೋರಾಟ ನಡೆಸುವವರೆಗೂ ಕ್ರಮಕ್ಕೆ ಮುಂದಾಗಿರಲಿಲ್ಲ’ಎಂದು ಟೀಕಿಸಿದ್ದಾರೆ.

‘ಎಫ್‌ಐಆರ್ ದಾಖಲಿಸಲೂ ನಾವು ಈಗ ಪ್ರತಿಭಟನೆ ಮಾಡಬೇಕಿದೆಯೇ? ಪೊಲೀಸ್ ಠಾಣೆಗೆ ಹೋಗಲೂ ಸಂತ್ರಸ್ತರಿಗೆ ಕಷ್ಟವಾಗುತ್ತಿರುವುದೇಕೆ?’ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ಬದ್ಲಾಪುರ ಪ್ರಕರಣದಲ್ಲಿ ನ್ಯಾಯ ಒದಗಿಸುವ ಬದಲು, ಪ್ರಕರಣ ಮುಚ್ಚಿಹಾಕಲು ಸಾಕಷ್ಟು ಪ್ರಯತ್ನ ನಡೆದಿದೆ. ಮಹಿಳೆಯರು ಮತ್ತು ದುರ್ಬಲ ವರ್ಗದ ಜನರು ಅತಿ ದೊಡ್ಡ ಸಂಖ್ಯೆಯಲ್ಲಿ ಸಂತ್ರಸ್ತರಾಗಿದ್ದಾರೆ ಎಂದು ಅವರು ದೂರಿದ್ಧಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT