ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿವಿಎಸ್‌ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಆತಂಕ ಪಡಬೇಕಿಲ್ಲ: ಜೋಶಿ

Published 7 ಜೂನ್ 2023, 16:36 IST
Last Updated 7 ಜೂನ್ 2023, 16:36 IST
ಅಕ್ಷರ ಗಾತ್ರ

ನವದೆಹಲಿ: ‘ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಮಾಧ್ಯಮಗಳ ವರದಿಗಳ ಕಾರಣ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ’ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ  ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗೌಡರು ಹಿರಿಯ ರಾಜಕಾರಣಿ. ಪಕ್ಷದಲ್ಲಿ ಹಾಗೂ ಬಿಜೆಪಿ ಆಡಳಿತದಲ್ಲಿ ಹಲವು ಹುದ್ದೆಗಳನ್ನು ಅಲಂಕರಿಸಿದ್ದಾರೆ. ಇಂತಹ ಹಿರಿಯ ನಾಯಕರು ತಮ್ಮ ರಾಜಕೀಯ ಭವಿಷ್ಯದ ಕುರಿತು ಮಾಧ್ಯಮಗಳ ವರದಿಯಿಂದ ಆತಂಕಗೊಳ್ಳುವ ಅಗತ್ಯವಿಲ್ಲ’ ಎಂದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮನ್ನು ಒಳಗೊಂಡಂತೆ 13 ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಿರುವ ಕುರಿತು ಮಾಧ್ಯಮ ವರದಿಗಳ ಬಗ್ಗೆ ಪಕ್ಷವು ಸ್ಪಷ್ಟಪಡಿಸಬೇಕು ಎಂದು ಸದಾನಂದ ಗೌಡ ಅವರು ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಜೋಶಿ, ‘ಮುಖ್ಯವಾಹಿನಿಯ ಮಾಧ್ಯಮವಾಗಿರಲಿ ಅಥವಾ ಸಾಮಾಜಿಕ ಮಾಧ್ಯಮವಾಗಿರಲಿ, ಅವರು ತಮಗೆ ಬೇಕಾದುದ್ದನ್ನು ಬರೆಯಲು ಸ್ವತಂತ್ರರು. ಇಂತಹ ಸುದ್ದಿಗಳಿಗೆ ಗೌಡ ಅವರಂಥ ಹಿರಿಯ ನಾಯಕರು ಆತಂಕ ಪಡಬೇಕಿಲ್ಲ. ಪಕ್ಷ ಸದಾ ಗೌಡರ ಜೊತೆಗಿದೆ’ ಎಂದರು.

‘ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಯಾರಿಗೆ ಟಿಕೆಟ್ ನೀಡಬೇಕೆಂಬ ಬಗ್ಗೆ ಪಕ್ಷವು ಇನ್ನೂ ತೀರ್ಮಾನ ಕೈಗೊಂಡಿಲ್ಲ. ಚುನಾವಣೆ ಇನ್ನೂ ಒಂದು ವರ್ಷ ಬಾಕಿ ಇದ್ದು, ಅಭ್ಯರ್ಥಿಗಳನ್ನು ನಿರ್ಧರಿಸಲು ಇನ್ನೂ ಸಮಯವಿದೆ. ಪಕ್ಷದ ವರಿಷ್ಠರು ಅಭ್ಯರ್ಥಿಗಳನ್ನು ನಿರ್ಧರಿಸುತ್ತಾರೆಯೇ ಹೊರತು ಮಾಧ್ಯಮಗಳಲ್ಲ’ ಎಂದೂ ಪ್ರಲ್ಹಾದ ಜೋಶಿ ಹೇಳಿದರು.

Quote - ನವದೆಹಲಿ: ‘ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಮಾಧ್ಯಮಗಳ ವರದಿಗಳ ಕಾರಣ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಚಿಂತಿತರಾಗುವ ಅಗತ್ಯವಿಲ್ಲ’ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಬುಧವಾರ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT